ಸೆಂಚುರಿಯನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನಕ್ಕೆ ಮಳೆ ಅಡ್ಡಿಯಾಗಿದೆ. ಪ್ರಸ್ತುತ ಪಿಚ್ ಕವರ್ಗಳಿಂದ ಮುಚ್ಚಲಾಗಿದೆ. ಬೆಳಗ್ಗೆಯಿಂದಲೂ ಸೆಂಚುರಿಯನ್ನಲ್ಲಿ ತುಂತುರು ಮಳೆ ಬೀಳುತ್ತಿದ್ದು, ಪಂದ್ಯಾರಂಭ ಮತ್ತಷ್ಟು ತಡವಾಗುವ ಸಾಧ್ಯತೆಯಿದೆ.
ಮೊದಲ ದಿನ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 90 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 272 ರನ್ಗಳಿಸಿತ್ತು. ಕನ್ನಡಿಗ ಕೆಎಲ್ ರಾಹುಲ್ 248 ಎಸೆತಗಳಲ್ಲಿ ಅಜೇಯ 122 ರನ್ ಮತ್ತು ಅಜಿಂಕ್ಯ ರಹಾನೆ ಅಜೇಯ 40 ರನ್ಗಳಿಸಿ 2ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು.