ಕೊಲಂಬೊ: ಮಂಗಳವಾರ ಭಾರತದ ಆಲ್ರೌಂಡರ್ ಕೃನಾಲ್ ಪಾಂಡ್ಯರಿಗೆ ಕೋವಿಡ್ 19 ಪಾಸಿಟಿವ್ ದೃಢಪಟ್ಟಿದ್ದರಿಂದ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯವನ್ನು ಮುಂದೂಡಿ, ಅವರನ್ನು ಐಸೊಲೇಷನ್ ಮಾಡಿ, ಅವರ ಜೊತೆ ಸಂಪರ್ಕದಲ್ಲಿದ್ದ ಎಲ್ಲಾ 8 ಆಟಗಾರರನ್ನು ಕೊರೊನಾ ಪರೀಕ ಕೊರೊನಾಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಎಲ್ಲರಿಗೂ ನೆಗೆಟಿವ್ ವರದಿ ಬಂದಿದ್ದು ಬುಧವಾರ ನಡೆಯುವ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ.
ಪಂದ್ಯಕ್ಕೆ ಕೆಲವೇ ಘಂಟೆಗಳಿದ್ದಾಗ ನಡೆಸಿದ್ದ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ನಲ್ಲಿ ಕೃನಾಲ್ ಪಾಂಡ್ಯಗೆ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. ಈ ಕಾರಣದಿಂದ ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿತ್ತು. ಅವರ ಜೊತೆ ಸಂಪರ್ಕದಲ್ಲಿದ್ದ 8 ಕ್ರಿಕೆಟಿಗರನ್ನು ವೈದ್ಯಕೀಯ ತಂಡ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿತ್ತು. ಎಲ್ಲರಿಗೂ ನೆಗೆಟಿವ್ ಬಂದಿರುವುದು ಭಾರತ ತಂಡಕ್ಕೆ ನೆಮ್ಮದಿ ತಂದಿದೆ.