ಕೊಲಂಬೊ: ಭಾರತ ತಂಡದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಅತಿಥೇಯ ಶ್ರೀಲಂಕಾ ತಂಡದ ನಾಯಕ ದಾಸುನ್ ಶನಕ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡ ನಂತರವೂ ಶ್ರೀಲಂಕಾ ತಂಡ 2ನೇ ಪಂದ್ಯದಲ್ಲೂ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಈ ಪಂದ್ಯದಲ್ಲಿ ಆಲ್ರೌಂಡರ್ ಇಸುರು ಉದಾನ ಅವರ ಬದಲಿಗೆ ಕಾಸುನ್ ರಜಿತ ತಂಡ ತಂಡ ಸೇರಿಕೊಂಡಿಸದ್ದಾರೆ.
ಭಾರತ ತಂಡ ಎರಡನೇ ಪಂದ್ಯದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ.
ಶ್ರೀಲಂಕಾ: ಅವಿಷ್ಕಾ ಫರ್ನಾಂಡೊ, ಮಿನೋದ್ ಭನುಕಾ (ವಿಕೆಟ್ ಕೀಪರ್), ಭನುಕಾ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಾಸುನ್ ಶನಕಾ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಕಾಸುನ್ ರಜತ, ದುಷ್ಮಂತ ಚಮೀರಾ, ಲಕ್ಷಾನ್ ಸಂದಕನ್
ಭಾರತ: ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್