ಕೋಲ್ಕತ್ತಾ:ವೆಸ್ಟ್ ಇಂಡೀಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಭಾರತದ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಔಪಚಾರಿಕ ಪಂದ್ಯದಲ್ಲಿ ಭಾರತ ತಂಡದಲ್ಲಿ ನಾಲ್ಕು ಬದಲಾವಣೆ ಮಾಡಿಕೊಂಡಿದ್ದು, ವಿರಾಟ್ ಕೊಹ್ಲಿ, ರಿಷಭ್ ಪಂತ್, ಯುಜ್ವೇಂದ್ರ ಚಹಲ್ ಮತ್ತು ಭುವನೇಶ್ವರ್ ಕುಮಾರ್ ಬದಲಿಗೆ ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ಮತ್ತು ಆವೇಶ್ ಖಾನ್ ಸ್ಥಾನ ಪಡೆದುಕೊಂಡಿದ್ದಾರೆ. ಆವೇಶ್ ಖಾನ್ ಇದು ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ.
ಇತ್ತ ವಿಂಡೀಸ್ ತಂಡ ಕೂಡ 4 ಬದಲಾವಣೆ ಮಾಡಿಕೊಂಡಿದೆ, ಡೊಮೆನಿಕ್ ಡ್ರೇಕ್ಸ್, ಶಾಯ್ ಹೋಪ್, ಹೇಡನ್ ವಾಲ್ಶ್ ಮತ್ತು ಫಾಬಿಯನ್ ಅಲೆನ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.
ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್(ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಕೀರಾನ್ ಪೊಲಾರ್ಡ್(ನಾಯಕ), ಜೇಸನ್ ಹೋಲ್ಡರ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಡೊಮಿನಿಕ್ ಡ್ರೇಕ್ಸ್, ಫ್ಯಾಬಿಯನ್ ಅಲೆನ್, ಹೇಡನ್ ವಾಲ್ಷ್
ಭಾರತ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್