ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ ಮೂರು ಪಂದ್ಯಗಳ ಟಿ-20 ಸರಣಿಗೆ ವಿಕೆಟ್ ಕೀಪರ್ ರಿಷಬ್ ಪಂತ್ಗೆ ಉಪನಾಯಕನಾಗಿ ಬಡ್ತಿ ನೀಡಲಾಗಿದೆ. ಸ್ನಾಯು ಸೆಳೆತಕ್ಕೊಳಗಾಗಿ ಸರಣಿಯಿಂದ ಹೊರಬಿದ್ದ ಕೆ.ಎಲ್.ರಾಹುಲ್ ಬದಲಾಗಿ ರಿಷಬ್ ಪಂತ್ಗೆ ಈ ಸ್ಥಾನ ನೀಡಲಾಗಿದೆ.
ಈ ಮೂಲಕ ಹೊಡಿಬಡಿ ಆಟಗಾರ ರಿಷಬ್ ಪಂತ್ ಮೊದಲ ಬಾರಿಗೆ ಭಾರತ ತಂಡದ ಪ್ರಮುಖ ಸ್ಥಾನಕ್ಕೆ ಲಗ್ಗೆ ಇಟ್ಟಂತಾಗಿದೆ. ಈ ಇವರು ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನಾಯಕನಾದ ಅನುಭವ ಇದೆ.
ಬ್ಯಾಟಿಂಗ್ ಕಿಂಗ್ ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ ನಾಯಕತ್ವದಿಂದ ಹಿಂದೆ ಸರಿದ ಬಳಿಕ ರೋಹಿತ್ ಶರ್ಮಾರನ್ನು ಏಕದಿನ ಮತ್ತು ಟಿ-20 ತಂಡಕ್ಕೆ ನಾಯಕನನ್ನಾಗಿ ಘೋಷಣೆ ಮಾಡಲಾಗಿದೆ. ಅಲ್ಲದೇ, ಆರಂಭಿಕ ಆಟಗಾರ ಕೆ.ಎಲ್.ರಾಹುಲ್ಗೆ ಉಪನಾಯಕನ ಸ್ಥಾನ ನೀಡಲಾಗಿತ್ತು.