ಕರ್ನಾಟಕ

karnataka

ETV Bharat / sports

ರಾಷ್ಟ್ರಗೀತೆ ನುಡಿಸುವ ವೇಳೆ ಮೆಚ್ಚುಗೆ ಗಳಿಸಿದ ಕ್ರಿಕೆಟಿಗ ಕೆ ಎಲ್ ರಾಹುಲ್‌ ನಡೆ - ಮೆಚ್ಚುಗೆ ಗಳಿಸಿದ ಕ್ರಿಕೆಟಿಗ ಕೆ ಎಲ್ ರಾಹುಲ್‌ ನಡೆ

ಜಿಂಬಾಬ್ವೆ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯ ಆರಂಭಗೊಳ್ಳುವುದಕ್ಕೂ ಮುಂಚಿತವಾಗಿ ಟೀಂ ಇಂಡಿಯಾ ಕ್ಯಾಪ್ಟನ್​ ಕೆ ಎಲ್ ರಾಹುಲ್​​​ ನಡೆದುಕೊಂಡಿರುವ ರೀತಿಗೆ ಇದೀಗ ಮೆಚ್ಚುಗೆ ವ್ಯಕ್ತವಾಗ್ತಿದೆ.

KL Rahul gesture
KL Rahul gesture

By

Published : Aug 19, 2022, 4:22 PM IST

Updated : Aug 19, 2022, 10:07 PM IST

ಹರಾರೆ: ಜಿಂಬಾಬ್ವೆ ವಿರುದ್ಧ ನಿನ್ನೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್​​ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಆದರೆ, ಪಂದ್ಯಾರಂಭಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ಕೆ. ಎಲ್.ರಾಹುಲ್ ನಡೆದುಕೊಂಡ ರೀತಿ ಮೆಚ್ಚುಗೆಗೆ ಪಾತ್ರವಾಗಿದೆ.

ಕ್ರಿಕೆಟ್ ಪಂದ್ಯ ಶುರುವಾಗುವುದಕ್ಕೂ ಮುಂಚಿತವಾಗಿ ಉಭಯ ದೇಶಗಳ ರಾಷ್ಟ್ರಗೀತೆ ಹಾಡುವುದು ಸಂಪ್ರದಾಯ. ನಿನ್ನೆಯೂ ಭಾರತ-ಜಿಂಬಾಬ್ವೆ ನಡುವಿನ ಪಂದ್ಯ ಆರಂಭಗೊಳ್ಳುವುದಕ್ಕೂ ಮುನ್ನ ರಾಷ್ಟ್ರಗೀತೆ ಹಾಡಲಾಯಿತು. ಈ ವೇಳೆ ಚ್ಯೂಯಿಂಗ್ ಗಮ್​ ಜಗಿಯುತ್ತಿದ್ದ ರಾಹುಲ್​, ಇನ್ನೇನು ರಾಷ್ಟ್ರಗೀತೆ ಆರಂಭವಾಗಲಿದೆ ಎಂಬುದು ಗೊತ್ತಾಗುತ್ತಿದ್ದಂತೆ ತೆಗೆದು ಎಸೆದಿದ್ದಾರೆ. ಈ ಮೂಲಕ ಗೌರವ ನೀಡಿದ್ದಾರೆ.

ಕೆ ಎಲ್ ರಾಹುಲ್​​ ನಡೆಯನ್ನು ನೆಟ್ಟಿಗರು ಮುಕ್ತಕಂಠದಿಂದ ಹೊಗಳಿದ್ದು, ನಿಮ್ಮಿಂದ ನಮಗೆ ಮತ್ತಷ್ಟು ಹೆಮ್ಮೆಯಾಗುತ್ತಿದೆ ಎಂದು ಟ್ವೀಟ್‌ಗಳನ್ನು ಮಾಡಿದ್ದಾರೆ. ಇಂಡಿಯನ್​ ಪ್ರೀಮಿಯರ್ ಲೀಗ್ ಮುಕ್ತಾಯಗೊಂಡ ಬಳಿಕ ಗಾಯದಿಂದಾಗಿ ಹೊರಗುಳಿದಿದ್ದ ಕೆ ಎಲ್ ರಾಹುಲ್​ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ವೆಸ್ಟ್​ ಇಂಡೀಸ್ ವಿರುದ್ಧದ ಸರಣಿ ವೇಳೆಗೆ ತಂಡ ಸೇರಿಕೊಳ್ಳಬೇಕಾಗಿತ್ತು. ಆದರೆ, ಕೋವಿಡ್​​ನಿಂದಾಗಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು. ಜಿಂಬಾಬ್ವೆ ವಿರುದ್ಧ ಘೋಷಣೆಯಾಗಿದ್ದ ಟೀಂ ಇಂಡಿಯಾದಲ್ಲಿ ಅವರಿಗೆ ಅವಕಾಶ ನೀಡಿರಲಿಲ್ಲ. ಆದರೆ, ಸಂಪೂರ್ಣವಾಗಿ ಗುಣಮುಖರಾಗಿರುವ ಕಾರಣ ಸ್ಥಾನ ಪಡೆದುಕೊಂಡಿದ್ದು, ತಂಡದ ನಾಯಕತ್ವ ಹೊಣೆ ವಹಿಸಿಕೊಂಡಿದ್ದಾರೆ.

ಇಶಾನ್ ಕಿಶನ್ ಮೇಲೆ ಕೀಟ ದಾಳಿ:ರಾಷ್ಟ್ರಗೀತೆ ನಡೆಯುತ್ತಿದ್ದಾಗ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್​ ಇಶಾನ್ ಕಿಶನ್ ಹತ್ತಿರ ಕೀಟವೊಂದು ಸುಳಿದಾಡಿ ಕಣ್ಣಿಗೆ ತಾಗಿದೆ. ಇದರಿಂದ ಅರೆಕ್ಷಣ ಗಲಿಬಿಲಿಗೊಂಡು ಪಕ್ಕದಲ್ಲಿ ನಿಂತುಕೊಂಡಿದ್ದ ಕುಲ್ದೀಪ್ ಯಾದವ್​ ಅವರ ಕಡೆ ನೋಡಿ, ತದನಂತರ ಸುಮ್ಮನೆ ನಿಂತುಕೊಂಡರು.

IND vs ZIM ODI: ಧವನ್​- ಗಿಲ್​​ ಜೊತೆಯಾಟ.. ಜಿಂಬಾಬ್ವೆ ವಿರುದ್ಧ 10 ವಿಕೆಟ್​ ಜಯ

ಹರಾರೆ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 189ರನ್​​​ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 30.5 ಓವರ್​​ಗಳಲ್ಲಿ ಯಾವುದೇ ವಿಕೆಟ್​ ನಷ್ಟವಿಲ್ಲದೆ 192ರನ್​ ಗಳಿಸುವ ಮೂಲಕ ಜಯ ದಾಖಲಿಸಿದೆ. ಭಾರತದ ಪರ ಶಿಖರ್ ಧವನ್ 113 ಎಸೆತದಲ್ಲಿ 9 ಬೌಂಡರಿಗಳ ನೆರವಿನಿಂದ 81 ರನ್ ಮತ್ತು ಶುಭಮನ್ ಗಿಲ್​ 72 ಎಸೆತದಲ್ಲಿ 10 ಬೌಂಡರಿ​ ಮತ್ತು 1 ಸಿಕ್ಸರ್ ಮೂಲಕ 82 ರನ್ ಸಿಡಿಸುವ ಮೂಲಕ ಭರ್ಜರಿ ಬ್ಯಾಟಿಂಗ್ ಮಾಡಿದರು. ಜಿಂಬಾಬ್ವೆ ತಂಡದ ಯಾವುದೇ ಬೌಲರ್​ ವಿಕೆಟ್ ಪಡೆದುಕೊಳ್ಳಲಿಲ್ಲ.

Last Updated : Aug 19, 2022, 10:07 PM IST

ABOUT THE AUTHOR

...view details