ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಆರಂಭಗೊಂಡಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 70 ಓವರ್ಗಳ ಬ್ಯಾಟಿಂಗ್ ಮಾಡಿ, 4 ವಿಕೆಟ್ ನಷ್ಟಕ್ಕೆ 221ರನ್ಗಳಿಕೆ ಮಾಡಿದ್ದು, ನಾಳೆಗೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದೆ.
ಮಳೆಯಿಂದಾಗಿ ಮುಂಬೈನ ವಾಂಖೆಡೆ ಮೈದಾನದಲ್ಲಿ ಪಂದ್ಯ ತಡವಾಗಿ ಆರಂಭಗೊಂಡಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಮಯಾಂಕ್ ಅಗರವಾಲ್ ಹಾಗೂ ಶುಬ್ಮನ್ ಗಿಲ್ 80ರನ್ಗಳ ಜೊತೆಯಾಟವಾಡಿದರು. ಈ ವೇಳೆ, 44ರನ್ಗಳಿಕೆ ಮಾಡಿದ್ದ ಶುಬ್ಮನ್ ಗಿಲ್ ಅಜಾಜ್ ಪಟೇಲ್ ಓವರ್ನಲ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಇದರ ಬೆನ್ನಲ್ಲೇ ಬಂದ ಅನುಭವಿ ಆಟಗಾರ ಚೇತೇಶ್ವರ್ ಪೂಜಾರಾ ಹಾಗೂ ಕ್ಯಾಪ್ಟನ್ ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಈ ಮೂಲಕ ಭಾರತ 80 ರನ್ಗಳಿಕೆ 3 ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಯಿತು.
ಈ ವೇಳೆ, ಮಧ್ಯಮ ಕ್ರಮಾಂಕದಲ್ಲಿ ಮಯಾಂಕ್ ಅಗರವಾಲ್ ಜೊತೆಯಾದ ಮೊದಲ ಟೆಸ್ಟ್ ಪಂದ್ಯದ ಹೀರೋ ಶ್ರೇಯಸ್ ಅಯ್ಯರ್ ಸ್ವಲ್ಪ ಹೊತ್ತು ಪ್ರತಿರೋಧ ನೀಡಿದ್ರು. ಆದರೆ 18ರನ್ಗಳಿಕೆ ಮಾಡಿದ ವೇಳೆ ಅಜಾಜ್ ಪಟೇಲ್ ಓವರ್ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಹೀಗಾಗಿ ತಂಡ 160ರನ್ಗಳಿಕೆ ಮಾಡುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತು.