ಕೇಪ್ಟೌನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಸರಣಿ ಗೆಲುವನ್ನು ನಿರ್ಧರಿಸುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಪಡೆ ಆರಂಭಿಕ ಆಘಾತ ಅನುಭವಿಸಿದೆ. ಮೊದಲ ದಿನ ಭೋಜನ ವಿರಾಮಕ್ಕೆ ಭಾರತ 2 ವಿಕೆಟ್ ಕಳೆದುಕೊಂಡು 75 ರನ್ಗಳಿಸಿದೆ.
ಮಂಗಳವಾರ ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಭಾರತೀಯ ಆರಂಭಿಕರಾದ ಮಯಾಂಕ್ ಅಗರ್ವಾಲ್(15) ಮತ್ತು ಕೆಎಲ್ ರಾಹುಲ್(12) ನಿರೀಕ್ಷಿತ ಪ್ರರರ್ಶನ ತೋರುವಲ್ಲಿ ವಿಫಲರಾದರು.
33ಕ್ಕೆ 2 ವಿಕೆಟ್ ಕಳೆದುಕೊಂಡಿದ್ದ ವೇಳೆ ಒಂದಾದ ನಾಯಕ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ್ ಪೂಜಾರ 3ನೇ ವಿಕೆಟ್ ಜೊತೆಯಾಟದಲ್ಲಿ 42 ರನ್ಗಳ ಜೊತೆಯಾಟ ನೀಡಿ ಆರಂಭಿಕ ಆಘಾತದಿಂದ ಪಾರು ಮಾಡಿದ್ದಾರೆ.