ಮುಂಬೈ :ಐಸಿಸಿ ಟಿ20 ವಿಶ್ವಕಪ್ ಮುಕ್ತಾಯವಾಗುತ್ತಿದ್ದಂತೆ ಚುಟುಕು ಕ್ರಿಕೆಟ್ ನಾಯಕತ್ವ ಸ್ಥಾನಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಬಿಸಿಸಿಐ ಏಕದಿನ ನಾಯಕತ್ವದಿಂದಲೂ ಕೆಳಗಿಳಿಸಿ, ಸೀಮಿತ ಓವರ್ಗಳ ಕ್ರಿಕೆಟ್ಗೆ ರೋಹಿತ್ ಶರ್ಮಾ ಅವರನ್ನ ನಾಯಕನನ್ನಾಗಿ ಆಯ್ಕೆ ಮಾಡಿದೆ. ಈ ವಿಚಾರವಾಗಿ ಬಿಸಿಸಿಐ ಮತ್ತು ವಿರಾಟ್ ಕೊಹ್ಲಿ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಆಯ್ಕೆ ಸಮಿತಿ ಕೂಡ ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಜನವರಿಯಲ್ಲಿ ಆರಂಭಗೊಳ್ಳಲಿರುವ ಏಕದಿನ ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಳಿಸಿ ಮಾತನಾಡಿರುವ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ, ಟಿ20 ನಾಯಕತ್ವ ತ್ಯಜಿಸುವಂತೆ ವಿರಾಟ್ ಕೊಹ್ಲಿಗೆ ಯಾರೂ ಕೂಡ ಹೇಳಿರಲಿಲ್ಲ. ಏಕದಿನ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಬಿಸಿಸಿಐ ಮತ್ತು ವಿರಾಟ್ ಕೊಹ್ಲಿ ನಡುವೆ ಯಾವುದೇ ರೀತಿಯ ಗೊಂದಲ್ಲವಿಲ್ಲ ಎಂದಿದ್ದಾರೆ.
ಟಿ20 ಕ್ರಿಕೆಟ್ ನಾಯಕತ್ವ ತ್ಯಜಿಸುವುದಾಗಿ ವಿರಾಟ್ ಕೊಹ್ಲಿ ತಿಳಿಸಿದ ನಂತರ, ಸೀಮಿತ ಓವರ್ಗಳ ಕ್ರಿಕೆಟ್ ಓರ್ವ ನಾಯಕನೊಂದಿಗೆ ಉತ್ತಮವಾಗಿರುತ್ತದೆ ಎಂದು ನಾವು ತಿಳಿಸಿದ್ದೆವು ಎಂದಿದ್ದಾರೆ.