ಹೈದರಾಬಾದ್: ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆಲುವು ನಿರ್ಧರಿಸುವ ಮೂರನೇ, ನಿರ್ಣಾಯಕ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಹೈದರಾಬಾದ್ನ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.
ಭುವನ್ ಇನ್ ಪಂತ್ ಔಟ್: ಕೆಲ ಪಂದ್ಯಗಳಿಂದ ವಿಫಲರಾಗುತ್ತಿರುವ ಭುವನೇಶ್ವರ್ ಕುಮಾರ್ ತಂಡದಲ್ಲಿ ಮತ್ತೆ ಸ್ಥಾನ ಪಡೆದಿದ್ದಾರೆ. ವಿಕೆಟ್ ಕೀಪರ್ ರಿಷಬ್ ಪಂತ್ರನ್ನು ಬಿಡಲಾಗಿದೆ. ಆಸ್ಟ್ರೇಲಿಯಾ ಕೂಡ ಸೀನ್ ಅಬ್ಬಾಟ್ ಬದಲಾಗಿ ಜೋಶ್ ಇಂಗ್ಲಿಸ್ರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಆಸ್ಟ್ರೇಲಿಯಾ:ಆ್ಯರೋನ್ ಫಿಂಚ್ (ನಾಯಕ), ಕ್ಯಾಮರೂನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಡೇನಿಯಲ್ ಸ್ಯಾಮ್ಸ್, ಪ್ಯಾಟ್ ಕಮ್ಮಿನ್ಸ್, ಆ್ಯಡಂ ಜಂಪಾ, ಜೋಶ್ ಹೇಜಲ್ವುಡ್.
ಭಾರತ:ಕೆ.ಎಲ್. ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯಾ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಹಲ್.
ಓದಿ:ದುಲೀಪ್ ಟ್ರೋಫಿ ಫೈನಲ್: ಸ್ಲೆಡ್ಜಿಂಗ್ ವಿವಾದಕ್ಕೆ ಮೈದಾನದಿಂದ ಹೊರನಡೆದ ಯಶಸ್ವಿ ಜೈಸ್ವಾಲ್