ಕರ್ನಾಟಕ

karnataka

ETV Bharat / sports

ವೆಸ್ಟ್​ ಇಂಡೀಸ್​ ವಿರುದ್ಧ ಕ್ಲೀನ್​ ಸ್ವೀಪ್ ಸಾಧನೆ.. ಏಕದಿನ ರ್‍ಯಾಂಕಿಂಗ್‌ ಭಾರತಕ್ಕೆ 3ನೇ ಸ್ಥಾನ - Etv bharat kannada

ವೆಸ್ಟ್​ ಇಂಡೀಸ್ ವಿರುದ್ಧದ ಸರಣಿ ಕ್ಲೀನ್​ ಸ್ವೀಪ್ ಮಾಡಿರುವ ಟೀಂ ಇಂಡಿಯಾ ಐಸಿಸಿ ಏಕದಿನ ಶ್ರೇಯಾಂಕದಲ್ಲಿ 3ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡಿದೆ.

India maintain 3rd spot in ODI team rankings
India maintain 3rd spot in ODI team rankings

By

Published : Jul 28, 2022, 3:29 PM IST

ದುಬೈ:ವೆಸ್ಟ್​ ಇಂಡೀಸ್​​ ವಿರುದ್ಧ ನಡೆದ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಕ್ಲೀನ್​ ಸ್ವೀಪ್ ಸಾಧನೆ ಮಾಡಿರುವ ಟೀಂ ಇಂಡಿಯಾ ಐಸಿಸಿ ಏಕದಿನ ರ್‍ಯಾಂಕಿಂಗ್​ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಮುಂದುವರೆದಿದೆ. ಹಿರಿಯ ಆಟಗಾರರ ಅನುಪಸ್ಥಿತಿ ಮಧ್ಯೆ ಅದ್ಭುತ ಪ್ರದರ್ಶನ ನೀಡಿರುವ ಯಂಗ್ ಇಂಡಿಯಾ ಮೂರು ಪಂದ್ಯಗಳಲ್ಲಿ ಸಂಘಟಿತ ಹೋರಾಟದ ಬಲದಿಂದ 3-0 ಅಂತರದ ಜಯ ಸಾಧಿಸಿದೆ. ಈ ಮೂಲಕ 110 ಪಾಯಿಂಟ್​​ಗಳಿಕೆ ಮಾಡಿದೆ.

ಪಾಕಿಸ್ತಾನ 106 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಉಳಿದಂತೆ 128 ಅಂಕಗಳಿಕೆ ಮಾಡಿರುವ ನ್ಯೂಜಿಲ್ಯಾಂಡ್​ ಅಗ್ರ ಸ್ಥಾನ ಕಾಯ್ದುಕೊಂಡಿದ್ದು, ಇಂಗ್ಲೆಂಡ್​ 119 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಇದನ್ನೂಓದಿರಿ:ಇತಿಹಾಸ ಸೃಷ್ಟಿಸಿದ ಸೂರಜ್​​: ವಿಶ್ವ ಚಾಂಪಿಯನ್​​ಶಿಪ್​​ನಲ್ಲಿ ಭಾರತಕ್ಕೆ ಚಿನ್ನ ಗೆದ್ದ 16ರ ಪೋರ

ಈ ಹಿಂದೆ ಇಂಗ್ಲೆಂಡ್​ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ ಮೂರನೇ ಸ್ಥಾನಕ್ಕೆ ಲಗ್ಗೆ ಹಾಕಿತ್ತು. ಆದರೆ, ವೆಸ್ಟ್ ಇಂಡೀಸ್​ ವಿರುದ್ಧದ ಸರಣಿಯಲ್ಲಿ ಕ್ಲೀನ್​ ಸ್ವೀಪ್ ಸಾಧನೆ ಮಾಡುವ ಮೂಲಕ 3ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡಿದೆ.

ನಿನ್ನೆ ರಿಲೀಸ್ ಆಗಿದ್ದ ಪ್ಲೇಯರ್ಸ್​​​ಗಳ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್​ ಕೊಹ್ಲಿ ಒಂದೊಂದು ಸ್ಥಾನ ಕುಸಿತ ಕಂಡಿದ್ದರು. ವೆಸ್ಟ್​ ಇಂಡೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಶಿಖರ್ ಧವನ್​ 13ನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ.

ABOUT THE AUTHOR

...view details