ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಭಾರತ ದಾಖಲೆಯ 10 ವಿಕೆಟ್ಗಳ ಭರ್ಜರಿ ಜಯಗಳಿಸುವ ಮೂಲಕ ಐಸಿಸಿ ಏಕದಿನ ರ‍್ಯಾಂಕ್ ಪಟ್ಟಿಯಲ್ಲೂ ಮಹತ್ವದ ಸ್ಥಾನ ಪಡೆದಿದೆ. ಇದೀಗ ಹೊರಬಿದ್ದ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಹಿಂದಿಕ್ಕಿ 3ನೇ ಸ್ಥಾನ ಪಡೆದುಕೊಂಡಿದೆ.
ನಿನ್ನೆ ಕೆನಿಂಗ್ಟನ್ ಓವೆಲ್ನಲ್ಲಿ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ ಬೂಮ್ರಾ 6 ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ಬ್ಯಾಟರ್‌ಗಳ ಆಟಕ್ಕೆ ಕಡಿವಾಣ ಹಾಕಿದ್ದರು. ರೋಹಿತ್ ಶರ್ಮಾ ಬಳಗ ಯಾವುದೇ ವಿಕೆಟ್ ನಷ್ಟವಿಲ್ಲದೇ ಮ್ಯಾಚ್ ಗೆದ್ದು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲೂ ತಂಡದ ಅಂಕಗಳನ್ನು 108 ಕ್ಕೇರಿಸಿತು. ಉಳಿದಂತೆ, 126 ಅಂಕಗಳೊಂದಿಗೆ ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿದ್ದರೆ, 122 ಅಂಕಗಳೊಂದಿಗೆ ಇಂಗ್ಲೆಂಡ್ ತಂಡ ಎರಡನೇ ಸ್ಥಾನದಲ್ಲಿದೆ. ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ.