ದುಬೈ: ಟಿ20 ವಿಶ್ವಕಪ್ನ ಕೊನೆಯ ಸೂಪರ್ ಲೀಗ್ ಪಂದ್ಯದಲ್ಲಿ ನಮೀಬಿಯಾ ವಿರುದ್ಧ 9 ವಿಕೆಟ್ಗಳ ಜಯ ಸಾಧಿಸಿ ತನ್ನ ವಿಶ್ವಕಪ್ ಅಭಿಯಾನವನ್ನು ಅಂತ್ಯಗೊಳಿಸಿದೆ.
ವಿಶ್ವಕಪ್ ಎತ್ತಿ ಹಿಡಿಯುವ ನೆಚ್ಚಿನ ತಂಡವಾಗಿ ಟೂರ್ನಿ ಪ್ರವೇಶಿಸಿದ್ದ ಭಾರತ ತಂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾಯಿತು. ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 10 ಸೋಲು ಕಂಡರೆ 2ನೇ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 8 ವಿಕೆಟ್ಗಳ ಸೋಲು ಕಾಣುವ ಮೂಲಕ ಟೂರ್ನಿಯಲ್ಲಿ ಭಾಗಶಃ ಹೊರಬಿದ್ದಿತ್ತು. ಭಾನುವಾರ ನ್ಯೂಜಿಲ್ಯಾಂಡ್ ತಂಡ ಅಫ್ಘಾನಿಸ್ತಾನದ ವಿರುದ್ಧ ಗೆಲ್ಲುತ್ತಿದ್ದಂತೆ ಭಾರತ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಂಡಿತ್ತು.
ಸೋಮವಾರ ಔಪಚಾರಿಕವಾಗಿದ್ದ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ನೀಡಿದ್ದ 133 ರನ್ಗಳ ಗುರಿಯನ್ನು 15.2 ಓವರ್ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ತಲುಪಿತು. ರೋಹಿತ್ ಶರ್ಮಾ 37 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ಗಳ ಸಹಿತ 56 ರನ್ಗಳಿಸಿದರೆ, ಕೆ.ಎಲ್.ರಾಹುಲ್ 36 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್ಗಳ ಸಹಿತ ಅಜೇಯ 54 ರನ್ ಮತ್ತು ಸೂರ್ಯಕುಮಾರ್ ಯಾದವ್ 19 ಎಸೆತಗಳಲ್ಲಿ ಅಜೇಯ 25 ರನ್ಗಳಿಸಿ ತಂಡವನ್ನು ಗೆಲುವಿನ ಗಡಿ ದಾಟಿಸಿದರು.