ಪರ್ತ್ (ಆಸ್ಟ್ರೇಲಿಯಾ):ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ನ 4 ಪಂದ್ಯಗಳು ಈಗಾಗಲೇ ಮಳೆಗೆ ಆಹುತಿಯಾಗಿವೆ. ಇಂದು ಪರ್ತ್ನಲ್ಲಿ ನಡೆಯುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೂ ವರುಣ ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ.
ಪರ್ತ್ನಲ್ಲಿ ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದೆ. ಇದರಿಂದಾಗಿ ಮೊನ್ನೆಯ ಅಫ್ಘಾನಿಸ್ತಾನ- ಐರ್ಲೆಂಡ್, ಆಸ್ಟ್ರೇಲಿಯಾ-ಇಂಗ್ಲೆಂಡ್ ಪಂದ್ಯಗಳು ಒಂದೂ ಎಸೆತ ಕಾಣದೇ ರದ್ದಾಗಿದ್ದವು.
ಹವಾಮಾನ ಇಲಾಖೆಯ ಪ್ರಕಾರ, ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ತುಂತುರು ಮಳೆ ಬೀಳಲಿದೆ. ಮಧ್ಯಾಹ್ನ ಮತ್ತು ಸಂಜೆಯ ವೇಳೆ ಮಳೆ ಹೆಚ್ಚಾಗಲಿದೆ. ಗಂಟೆಗೆ 25 ರಿಂದ 35 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಪಂದ್ಯ ನಡೆಯುವುದು 50:50 ಸಾಧ್ಯತೆ ಇದೆ.