ಹೈದರಾಬಾದ್:ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಮಾದರಿಯ ಸರಣಿಗಾಗಿ ಭಾರತ ತಂಡ ಪ್ರಕಟವಾಗಿದೆ. ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಟೀಂ ಇಂಡಿಯಾವನ್ನು ಘೋಷಿಸಿದರು.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಮೂರು ಏಕದಿನ, ಮೂರು ಟಿ20, ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಸೂರ್ಯಕುಮಾರ್ ಯಾದವ್ಗೆ ಟಿ20 ನಾಯಕತ್ವವ ಹಸ್ತಾಂತರಿಸಲಾಗಿದ್ದು, ಕೆಎಲ್ ರಾಹುಲ್ಗೆ ಏಕದಿನ ಸರಣಿ ನಾಯಕತ್ವ, ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾಗೆ ನಾಯಕತ್ವ ವಹಿಸಲಾಗಿದೆ. ಟಿ20 ಮತ್ತು ಏಕದಿನ ಪಂದ್ಯಗಳಿಂದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ. ಉಳಿದಂತೆ ವೇಗಿ ಮೊಹಮ್ಮದ್ ಶಮಿ ಸದ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಅವರ ಲಭ್ಯತೆ ಫಿಟ್‌ನೆಸ್ ಮೇಲೆ ಅವಲಂಬಿತವಾಗಿದೆ.
ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ), ಜಿತೇಶ್ ಶರ್ಮಾ (ವಿ,ಕೀ), ರವೀಂದ್ರ ಜಡೇಜಾ (ಉ.ನಾ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.
ಏಕದಿನ ತಂಡ:ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾ ಮತ್ತು ವ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ದೀಪಕ್ ಚಾಹರ್.
ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ,ಕೀ), ಕೆಎಲ್ ರಾಹುಲ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉ.ನಾ), ಪ್ರಸಿದ್ಧ್ ಕೃಷ್ಣ, ಶಮಿ*.