ಮುಂಬೈ:2024ರಿಂದ 2027ರ ಅವಧಿಯಲ್ಲಿ ಒಟ್ಟು ನಾಲ್ಕು ಮಹಿಳಾ ವಿಶ್ವಕಪ್ಗಳು ನಡೆಯಲಿದ್ದು, ಇದರಲ್ಲಿ 2025ರ ಮಹಿಳಾ ಏಕದಿನ ವಿಶ್ವಕಪ್ ಭಾರತದಲ್ಲಿ ಆಯೋಜನೆಗೊಳ್ಳಲಿದೆ. ಇದಕ್ಕೆ ಸಂಬಂಧಿಸಿದಂತೆ ಐಸಿಸಿ ಮಾಹಿತಿ ಹಂಚಿಕೊಂಡಿದೆ. ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಕಾರ್ಯಕ್ರಮಕ್ಕೆ ಅನುಮೋದನೆ ಸಿಕ್ಕಿದ್ದು, ಶ್ರೀಲಂಕಾದಲ್ಲಿ ಮಹಿಳಾ ಚಾಂಪಿಯನ್ಸ್ ಟ್ರೋಫಿ ನಡೆಸಲು ನಿರ್ಧರಿಸಲಾಗಿದೆ.
ಉಳಿದ ವಿಶ್ವಕಪ್ಗಳಿಗೋಸ್ಕರ ಬಾಂಗ್ಲಾದೇಶ, ಇಂಗ್ಲೆಂಡ್ ಮತ್ತು ಶ್ರೀಲಂಕಾ ಆತಿಥ್ಯ ಪಡೆದುಕೊಂಡಿವೆ. ICC ಮಹಿಳಾ T-20 ವಿಶ್ವಕಪ್ 2024 ಬಾಂಗ್ಲಾದೇಶ, 2026ರ ಆವೃತ್ತಿಯ ವಿಶ್ವಕಪ್ ಇಂಗ್ಲೆಂಡ್ ಹಾಗೂ 2025ರಲ್ಲಿ ಭಾರತದಲ್ಲಿ ವಿಶ್ವಕಪ್ ಆಯೋಜನೆಗೊಳ್ಳಲಿದೆ. ಇದರ ಬಗ್ಗೆ ಮಾತನಾಡಿರುವ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ, ಬಾಂಗ್ಲಾದೇಶ, ಭಾರತ, ಇಂಗ್ಲೆಂಡ್ ಮತ್ತು ಶ್ರೀಲಂಕಾದಲ್ಲಿ ಐಸಿಸಿ ಮಹಿಳಾ ವಿಶ್ವಕಪ್ ಆಯೋಜನೆಯ ಆತಿಥ್ಯ ವಹಿಸಿಕೊಂಡಿದ್ದು, ಇದಕ್ಕೆ ನಾವು ಸಂತೋಷಪಡುತ್ತೇವೆ. ಮಹಿಳಾ ಕ್ರಿಕೆಟ್ ಮತ್ತಷ್ಟು ಉತ್ತುಂಗಕ್ಕೆ ತೆಗೆದುಕೊಂಡು ಹೋಗಲು ಇದು ಉತ್ತಮ ವೇದಿಕೆಯಾಗಲಿದೆ ಎಂದರು.