ನವದೆಹಲಿ:ಬರೋಬ್ಬರಿ ಆರು ವರ್ಷಗಳ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, ಉಭಯ ತಂಡಗಳ ನಡುವೆ ಆಗಸ್ಟ್ ತಿಂಗಳಲ್ಲಿ ಮೂರು ಏಕದಿನ ಪಂದ್ಯಗಳ ಸರಣಿ ಆಯೋಜನೆಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಜಿಂಬಾಬ್ವೆ ಕ್ರಿಕೆಟ್ ಬೋರ್ಡ್ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಈ ಸರಣಿಗೋಸ್ಕರ ಟೀಂ ಇಂಡಿಯಾ ಹೊಸ ಹೊಸ ಪ್ರತಿಭೆಗಳಿಗೆ ಚಾನ್ಸ್ ನೀಡುವ ಸಾಧ್ಯತೆ ದಟ್ಟವಾಗಿದೆ.
ಐಸಿಸಿ ಸೂಪರ್ ಲೀಗ್ ಭಾಗವಾಗಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದ್ದು, ಲಭ್ಯವಾಗಿರುವ ಮಾಹಿತಿ ಪ್ರಕಾರ ಕನ್ನಡಿಗ ಕೆಎಲ್ ರಾಹುಲ್ ತಂಡ ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್ 18,20 ಹಾಗೂ 22ರಂದು ಪಂದ್ಯಗಳು ನಡೆಯಲಿವೆ. ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್ನ ಭಾಗವಾಗಿ ಈ ಸರಣಿ ನಡೆಯಲಿದ್ದು, ವಿಶ್ವಕಪ್ಗೆ ನೇರ ಅರ್ಹತೆ ಪಡೆದುಕೊಳ್ಳಲು ಜಿಂಬಾಬ್ವೆಗೆ ಈ ಸರಣಿ ಮಹತ್ವ ಪಡೆದುಕೊಂಡಿದೆ. ಐಸಿಸಿ ಲೀಗ್ ಶ್ರೇಯಾಂಕದಲ್ಲಿ ಜಿಂಬಾಬ್ವೆ ಪ್ರಸ್ತುತ 12ನೇ ಸ್ಥಾನದಲ್ಲಿದೆ.