ಮೆಲ್ಬೋರ್ನ್ :ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ದ್ವಿತೀಯ ಇನಿಂಗ್ಸ್‌ನಲ್ಲಿ ಗಾಯಕ್ಕೆ ತುತ್ತಾಗಿದ್ದ ಭಾರತ ತಂಡದ ವೇಗಿ ಉಮೇಶ್ ಯಾದವ್, ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮುಂದಿನ ಎರಡು ಪಂದ್ಯಗಳಲ್ಲಿ ಆಡುವುದು ಬಹುತೇಕ ಅನುಮಾನ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನ 4ನೇ ಓವರ್ ಮಾಡುವಾಗ ಸ್ನಾಯು ಸೆಳೆತಕ್ಕೆ ತುತ್ತಾಗಿ ಪಂದ್ಯದಿಂದ ಹೊರ ನಡೆದಿದ್ದರು. ಈಗ ಮೂಲಗಳ ಪ್ರಕಾರ ಮುಂದಿನ ಎರಡು ಪಂದ್ಯಗಳಿಗೆ ಯಾದವ್ ಅಲಭ್ಯರಾಗುವುದು ಬಹುತೆಕ ಖಚಿತವಾಗಿದೆ.