ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಎಂಟು ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ತಂಡಗಳು 1-1 ರಲ್ಲಿ ಸರಣಿ ಸಮಬಲ ಸಾಧಿಸಿವೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡತ ಸಾಧಿಸಿ ಗೆದ್ದು ಬೀಗಿದ್ದ ಕಾಂಗರೂ ಪಡೆಗೆ, ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನ ಉತ್ತರ ನೀಡಿದೆ. ಈ ಗೆಲುವಿನ ನಂತರ ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಹಾಗೂ ತಂಡವನ್ನು ಅಭಿನಂದಿಸಿದ್ದಾರೆ.