ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ತಂಡ ಎಂಟು ವಿಕೆಟ್‌ಗಳಿಂದ ಜಯಗಳಿಸಿದ್ದು, ಈ ಬಗ್ಗೆ ತಂಡದ ನಾಯಕ ಅಜಿಂಕ್ಯ ರಹಾನೆ, ಆರಂಭಿಕ ಆಟಗಾರ ಶುಭಮನ್ ಗಿಲ್ ಮತ್ತು ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಶ್ಲಾಘಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ರಹಾನೆ "ಎಲ್ಲಾ ಆಟಗಾರರ ಬಗ್ಗೆ ನಿಜವಾಗಿಯೂ ಹೆಮ್ಮೆ ಇದೆ. ನಿಜವಾಗಿಯೂ ಎಲ್ಲರೂ ಚೆನ್ನಾಗಿ ಆಡಿದ್ದಾರೆ. ಚೊಚ್ಚಲ ಪಂದ್ಯವಾಡಿದ ಸಿರಾಜ್ ಮತ್ತು ಗಿಲ್ ಅವರಿಗೆ ಈ ಗೆಲುವಿನ ಕ್ರೆಡಿಟ್ ನೀಡಲು ಬಯಸುತ್ತೇನೆ. ಅಡಿಲೇಡ್ ಸೋಲಿನ ನಂತರ ಈ ಪಂದ್ಯದಲ್ಲಿ ಎಲ್ಲಾ ಆಟಗಾರರು ಉತ್ತಮ ಪ್ರದರ್ಶ ನೀಡಿದ್ದಾರೆ. ಅದರಲ್ಲೂ ಸಿರಾಜ್ ಮತ್ತು ಗಿಲ್ ಪಾತ್ರವು ಮುಖ್ಯವಾಗಿತ್ತು. ವಿಶೇಷವಾಗಿ 2ನೇ ಇನ್ನಿಂಗ್ಸ್‌ನಲ್ಲಿ ಉಮೇಶ್ ಅವರನ್ನು ಕಳೆದುಕೊಂಡ ನಂತರ ಸಿರಾಜ್ ಅವರ ಪಾತ್ರ ಬಹಳ ಪ್ರಮುಖವಾಗಿತ್ತು ಎಂದು "ಎಂದು ಹೇಳಿದ್ದಾರೆ.