ಅಡಿಲೇಡ್ (ಆಸ್ಟ್ರೇಲಿಯಾ):ಇಂಡಿಯಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ತಮ್ಮ ಪತ್ನಿ ರಿತಿಕಾ ಸಜ್ದೆ ಅವರ 33 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ರಿತಿಕಾಗೆ ಶುಭ ಹಾರೈಸಿರುವ ರೋಹಿತ್, ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಲವಾರು ಫೋಟೋಗಳನ್ನು ಪೋಸ್ಟ್ ಮಾಡಿ "ಜನ್ಮದಿನದ ಶುಭಾಶಯಗಳು ಪ್ರಿಯತಮೆ, ನಿನ್ನನ್ನು ಎಂದೆಂದಿಗೂ ಪ್ರೀತಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.
ಈ ಜೋಡಿ 2015 ರಲ್ಲಿ ವಿವಾಹವಾಗಿದ್ದು, ಇವರಿಗೆ ಓರ್ವ ಮಗಳಿದ್ದಾಳೆ.
ರೋಹಿತ್ ಪ್ರಸ್ತುತ ಆಸ್ಟ್ರೇಲಿಯಾದಲ್ಲಿದ್ದು, ಅಲ್ಲಿ ಭಾರತ ತಂಡವು ಟೆಸ್ಟ್ ಸರಣಿಯಲ್ಲಿ ತೊಡಗಿಸಿಕೊಂಡಿದೆ.
"ಟೀಮ್ ಇಂಡಿಯಾ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ತಮ್ಮ ಪುನರ್ವಸತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ ಮತ್ತು ಈಗ ಪ್ರಾಯೋಗಿಕವಾಗಿ ಸದೃಢರಾಗಿದ್ದಾರೆ.