ಬ್ರಿಸ್ಬೇನ್:ಬಾರ್ಡರ್ - ಗವಾಸ್ಕರ್ ಸರಣಿಯ ಅಂತಿಮ ಟೆಸ್ಟ್ ಪಂದ್ಯ ತೀವ್ರ ಕುತೂಹಲ ಕೆರಳಿಸಿದ್ದು, ದ್ವಿತೀಯ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ಸುಭದ್ರ ಸ್ಥಿತಿಯಲ್ಲಿದೆ.
ಟಿ ವಿರಾಮದ ವೇಳೆಗೆ ಭಾರತ ತಂಡ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು 183 ರನ್ಗಳಿಸಿದೆ. ಚೇತೇಶ್ವರ ಪೂಜಾರ 43* ಹಾಗೂ ರಿಷಭ್ ಪಂತ್ 10 * ರನ್ಗಳಿಸಿ ಕ್ರೀಸ್ನಲ್ಲಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದು, ದ್ವಿತೀಯ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ಮೊದಲ ವಿರಾಮದ ವೇಳೆಗೆ ಸುಭದ್ರ ಸ್ಥಿತಿಯಲ್ಲಿತ್ತು. ಕೊನೆಯ ದಿನ ಇನ್ನಿಂಗ್ಸ್ ಆರಂಭಿಸಿದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ತಂಡಕ್ಕೆ ಭದ್ರ ಬುನಾದಿ ಹಾಕಿಕೊಡುವಲ್ಲಿ ಮತ್ತೆ ಎಡವಿದರು. ರೋಹಿತ್ ಶರ್ಮಾ ಕೇವಲ 7 ರನ್ಗಳಿಸಿ ಔಟಾಗುವ ಮೂಲಕ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು. ನಂತರ ಕ್ರಿಸ್ಗಿಳಿದ ಅನುಭವಿ ಬ್ಯಾಟ್ಸ್ಮನ್ ಚೇತೇಶ್ವರ ಪೂಜಾರ, ಯಂಗ್ ಬಾಯ್ ಗಿಲ್ ಜೊತೆ ಅದ್ಭುತ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿ ಎರಡನೇ ವಿಕೆಟ್ಗೆ ಶತಕದ ಜೊತೆಯಾಟವಾಡಿತು.