ಬ್ರಿಸ್ಬೇನ್: ಬಾರ್ಡ್ - ಗವಾಸ್ಕರ್ ಸರಣಿಯ ಅಂತಿಮ ಟೆಸ್ಟ್ ಪಂದ್ಯ ತೀವ್ರ ಕುತೂಹಲ ಕೆರಳಿಸಿದ್ದು, ದ್ವಿತೀಯ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ಸುಭದ್ರ ಸ್ಥಿತಿಯಲ್ಲಿದೆ.
ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಕೊನೆಯ ಟೆಸ್ಟ್ ಪಂದ್ಯ ರೋಚಕತೆ ಪಡೆದುಕೊಂಡಿದ್ದು, ವಿರಾಮದ ವೇಳೆಗೆ ಟೀಂ ಇಂಡಿಯಾ 1 ವಿಕೆಟ್ ಕಳೆದುಕೊಂಡು 83ರನ್ಗಳಿಕೆ ಮಾಡಿದೆ.
ಎರಡನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 294 ರನ್ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದ್ದು, ಟೀಂ ಇಂಡಿಯಾ ಗೆಲುವಿಗೆ 328 ರನ್ಗಳ ಟಾರ್ಗೆಟ್ ನೀಡಿದೆ. ಇದರ ಬೆನ್ನಟ್ಟಿರುವ ರಹಾನೆ ಪಡೆ, ಮೊದಲ ವಿಕೆಟ್ ನಷ್ಟಕ್ಕೆ 83ರನ್ ಕಲೆ ಹಾಕಿದ್ದು, ಆರಂಭಿಕ ಆಟಗಾರ ರೋಹಿತ್ ಶರ್ಮಾ 7 ರನ್ಗಳಿಸಿ ಔಟಾಗಿದ್ದಾರೆ. ಚೇತೇಶ್ವರ್ ಪೂಜಾರಾ 8ರನ್ ಹಾಗೂ ಶುಬ್ಮನ್ ಗಿಲ್ 64 ರನ್ ಮಾಡಿ ಕ್ರೀಸ್ನಲ್ಲಿದ್ದಾರೆ. ಆಸ್ಟ್ರೇಲಿಯಾ ಪರ ಕಮಿನ್ಸ್ ಒಂದು ವಿಕೆಟ್ ಪಡೆದುಕೊಂಡರು.
ಓದಿ :ಗುಡ್ನ್ಯೂಸ್: ನೆಟ್ನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ ಅಶ್ವಿನ್, ಬುಮ್ರಾ!
2ನೇ ಇನ್ನಿಂಗ್ಸ್ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್ ಚೊಚ್ಚಲ 5 ವಿಕೆಟ್ ಪಡೆದುಕೊಂಡು ಮಿಂಚಿದ್ರೆ,. ಅವರಿಗೆ ಉತ್ತಮ ಸಾಥ್ ನೀಡಿರುವ ಠಾಕೂರ್ 4 ವಿಕೆಟ್ ಪಡೆದುಕೊಂಡರು.