ನವದೆಹಲಿ:ಆಸ್ಟ್ರೇಲಿಯಾದಲ್ಲಿ ಬಾರ್ಡರ್-ಗಾವಸ್ಕರ್ ಟ್ರೋಫಿ ಜಯಿಸಿ ಭಾರತಕ್ಕೆ ಮರಳಿರುವ ವೇಗಿ ಮೊಹಮ್ಮದ್ ಸಿರಾಜ್ ಅವರು ಐಶಾರಾಮಿ ಬಿಎಂಡಬ್ಲ್ಯೂ ಕಾರು ಖರೀದಿಸಿದ್ದು, ಹೊಸ ಕಾರಿನ ಚಿತ್ರ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
BMW ಕಾರು ಖರೀದಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ - ಮೊಹಮ್ಮದ್ ಸಿರಾಜ್
ತಾವು ಖರೀದಿಸಿರುವ ಕಾರಿನ ಚಿತ್ರ ಮತ್ತು ವಿಡಿಯೋವನ್ನು ಇನ್ಸ್ಟಾಗ್ರಾಂ ಖಾತೆಯ ಸ್ಟೇಟಸ್ಗೆ ಹಾಕಿಕೊಂಡಿದ್ದಾರೆ.
ಬಿಎಂಡಬ್ಲ್ಯೂ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್
ಟೆಸ್ಟ್ ಸರಣಿಯಲ್ಲಿ ಸಿರಾಜ್ ಗಮನಾರ್ಹ ಪ್ರದರ್ಶನ ನೀಡಿದ್ದು, 13 ವಿಕೆಟ್‌ಗಳನ್ನು ಕಿತ್ತು ಗಮನ ಸೆಳೆದಿದ್ದರು. ಸಿಡ್ನಿ ಮತ್ತು ಬ್ರಿಸ್ಬೇನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯಗಳ ವೇಳೆ ಆಸ್ಟ್ರೇಲಿಯಾ ಪ್ರೇಕ್ಷಕರಿಂದ ಜನಾಂಗೀಯ ನಿಂದನೆಗೂ ಒಳಗಾಗಿದ್ದರು. ಎರಡನೇ ಟೆಸ್ಟ್ ಪಂದ್ಯದಲ್ಲಿ ಅವರು ಪದಾರ್ಪಣೆ ಮಾಡಿದ್ದರು.
ಆಸ್ಟ್ರೇಲಿಯಾ ಪ್ರವಾಸಲ್ಲಿ ಪಾಲ್ಗೊಂಡಿದ್ದ ಭಾರತ ತಂಡ ಏಕದಿನ ಸರಣಿಯಲ್ಲಿ 2-1ರ ಸೋಲು, ಟಿ20 ಸರಣಿಯಲ್ಲಿ 2-1ರ ಗೆಲುವು ಮತ್ತು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1ರ ಗೆಲುವು (1 ಪಂದ್ಯ ಡ್ರಾ) ಕಂಡಿತ್ತು. ಈ ಪ್ರವಾಸದಲ್ಲಿ ಸಿರಾಜ್ ಕೂಡ ಉತ್ತಮ ಪ್ರದರ್ಶನ ನೀಡಿದ್ದರು.