ಬ್ರಿಸ್ಬೇನ್: ಆಸ್ಟ್ರೇಲಿಯಾ ಮತ್ತು ಭಾರತ ನಡುವೆ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪ್ರಾರಂಭವಾಗಿದೆ. ಈ ಪಂದ್ಯವು ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅವರ ಟೆಸ್ಟ್ ವೃತ್ತಿ ಜೀವನದ 100 ನೇ ಪಂದ್ಯವಾಗಿದೆ. ಪಂದ್ಯ ಪ್ರಾರಂಭವಾಗುವ ಮೊದಲು ಅವರ ತಂಡದ ಸದಸ್ಯರು ಗೌರವ ಸಲ್ಲಿಸಿದರು.
ಆಸೀಸ್ ಪರ 100 ಟೆಸ್ಟ್ ಪಂದ್ಯವಾಡಿದ 13ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಆಸ್ಟ್ರೇಲಿಯಾದ ಟೆಸ್ಟ್ ಸ್ಪೆಷಲಿಸ್ಟ್ ಸ್ಪಿನ್ನರ್. ಅವರು ಈವರೆಗೆ 396 ಟೆಸ್ಟ್ ವಿಕೆಟ್ ಪಡೆದಿದ್ದಾರೆ. ಇದಲ್ಲದೇ ಲಿಯಾನ್ ಟೆಸ್ಟ್ ಕ್ರಿಕೆಟ್ನಲ್ಲಿ 400 ವಿಕೆಟ್ ಗಳಿಸುವ ಮೂಲಕ ಮಹತ್ವದ ಮೈಲಿಗಲ್ಲು ತಲುಪುವ ಹಾದಿಯಲ್ಲಿದ್ದು, ಇಲ್ಲಿಯವರೆಗೆ 396 ವಿಕೆಟ್‌ಗಳನ್ನು ಪಡೆದಿದ್ದು, ಈ ಪಂದ್ಯದಲ್ಲಿ 4 ವಿಕೆಟ್ ಪಡೆದು ಹೊಸ ದಾಖಲೆ ಬರೆಯುವ ವಿಶ್ವಾಸದಲ್ಲಿದ್ದಾರೆ.