ಸಿಡ್ನಿ:ಆಸ್ಟ್ರೇಲಿಯಾ ನೆಲದಲ್ಲಿ ನಡೆದ ಟೆಸ್ಟ್ ಮ್ಯಾಚ್ ಒಂದರ ನಾಲ್ಕನೇ ಇನ್ನಿಂಗ್ಸ್ನಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ ಅತಿ ಕಿರಿಯ ವಯಸ್ಸಿನ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ರಿಷಭ್ ಪಂತ್ ಪಾತ್ರರಾಗಿದ್ದಾರೆ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್‌ಸಿಜಿ) ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಅಂತಿಮ ದಿನದಂದು ಪಂತ್ ಈ ಸಾಧನೆ ಮಾಡಿದ್ದಾರೆ. ನಾಯಕ ಅಜಿಂಕ್ಯ ರಹಾನೆ ಬೇಗನೆ ನಿರ್ಗಮಿಸಿದ ನಂತರ ಬ್ಯಾಟಿಂಗ್ಗೆ ಇಳಿದ ಪಂತ್, ಬಿರುಸಿನ ಬ್ಯಾಟಿಂಗ್ ನಡೆಸಿ ಭಾರತಕ್ಕೆ ಗೆಲುವಿನ ಆಸೆ ಮೂಡಿಸಿದ್ರು. 118 ಎಸೆತಗಳಲ್ಲಿ 97 ರನ್ ಸಿಡಿಸಿದ ಪಂತ್ ನಾಥನ್ ಲಿಯಾನ್ಗೆ ವಿಕೆಟ್ ಒಪ್ಪಿಸಿದ್ರು.