ದುಬೈ: ಐಸಿಸಿ ಪುರುಷರ ಟೆಸ್ಟ್ ಪ್ಲೇಯರ್ ಶ್ರೇಯಾಂಕದಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ಮತ್ತು ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಭಾರಿ ಏರಿಕೆ ಕಂಡಿದ್ದಾರೆ.
ಇಂಗ್ಲೆಂಡ್ ತಂಡ ಸದ್ಯ ಶ್ರೀಲಂಕಾ ಪ್ರವಾಸದಲ್ಲಿದ್ದು, ಮೊದಲ ಟೆಸ್ಟ್ ಪಂದ್ಯದಲ್ಲೇ ಇಂಗ್ಲೆಂಡ್ ನಾಯಕ ಜೋ ರೂಟ್ ದ್ವಿಶತಕ ಸಿಡಿಸಿ ಮಿಂಚಿದ್ದರು. ರ‍್ಯಾಂಕಿಂಗ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದ ರೂಟ್ ಪಾಕಿಸ್ತಾನದ ಬಾಬರ್ ಅಜಮ್ ಮತ್ತು ಭಾರತದ ಚೇತೇಶ್ವರ ಪೂಜಾರ ಅವರನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೆರಿದ್ದಾರೆ. ಭಾರತ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ 10ನೇ ಸ್ಥಾನದಿಂದ, 7ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.
ಇನ್ನು ಟೀಮ್ ಇಂಡಿಯಾದ ಯಂಗ್ ಬ್ಯಾಟ್ಸಮನ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ರ‍್ಯಾಂಕಿಂಗ್ ಪಟ್ಟಿಯಲ್ಲಿ 13ನೇ ಸ್ಥಾನಕ್ಕೇರಿದ್ದು, ಇದು ಅವರ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕವಾಗಿದೆ. ಅಲ್ಲದೇ ವಿಕೆಟ್ ಕೀಪರ್ ಸ್ಥಾನದಲ್ಲಿ ಅಗ್ರ ಶ್ರೇಯಾಂಕ ಪಡೆದುಕೊಂಡಿದ್ದಾರೆ.
ಆಸ್ಟ್ರೇಲಿಯಾ ತಂಡದ ಬ್ಯಾಟ್ಸಮನ್ ಲಾಬುಶೇನ್ ವಿರಾಟ್ ಕೊಹ್ಲಿ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಹೆಜಲ್ವುಡ್ 4 ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಭಾರತದ ಆರ್. ಅಶ್ವಿನ್ 7ನೇ ಸ್ಥಾನದಿಂದ 8ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.
ಓದಿ: ಆಸೀಸ್ ವಿರುದ್ಧ ಐತಿಹಾಸಿಕ ಗೆಲುವು: ಕೊಹ್ಲಿ, ರಹಾನೆ ಬಗ್ಗೆ ರವಿಶಾಸ್ತ್ರಿ ಮಾತು