ಮೆಲ್ಬೋರ್ನ್:ಆಸ್ಟ್ರೇಲಿಯಾ ವಿರುದ್ಧ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಮೊಹಮ್ಮದ್ ಸಿರಾಜ್ ತಾವಾಡಿದ ಮೊದಲ ಪಂದ್ಯದಲ್ಲಿ ಹೊಸ ದಾಖಲೆ ಬರೆದರು.
ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 36.3 ಓವರ್ ಬೌಲ್ ಮಾಡಿದ ಸಿರಾಜ್ 77 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅವರು ಏಳು ವರ್ಷಗಳಲ್ಲಿ ಭಾರತ ಪರ ಡೆಬ್ಯೂ ಮಾಡಿದ ಬೌಲರ್ಗಳ ಪೈಕಿ ಈ ಸಾಧನೆಗೈದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.