ಮೊಹಾಲಿ, ಪಂಜಾಬ್:ಆಲ್ರೌಂಡರ್ ಹಾರ್ದಿಕ್ ಪಾಂಡ್ಯಾ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮೊಹಾಲಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ಗೆ 208 ರನ್ಗಳ ಬೃಹತ್ ಮೊತ್ತ ಪೇರಿಸಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಲು ಅವಕಾಶ ಪಡೆದ ಭಾರತ ತವರಿನಲ್ಲಿ ಅಬ್ಬರಸಿ ಬೊಬ್ಬಿರಿಯಿತು. ಆರಂಭದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ವಿಕೆಟ್ ಬೇಗನೇ ಕಳೆದುಕೊಂಡರೂ ಧೃತಿಗೆಡದ ರಾಹುಲ್, ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟ್ ಬೀಸಿದರು.
ಸ್ಟ್ರೈಕ್ರೇಟ್ ಕಾರಣಕ್ಕಾಗಿ ಟೀಕೆಗೆ ಗುರಿಯಾಗಿರುವ ಕನ್ನಡಿಗ ಕೆ ಎಲ್ ರಾಹುಲ್ ಕೇವಲ 35 ಎಸೆತಗಳಲ್ಲಿ 55 ರನ್ ಬಾರಿಸಿದರು. ಇದರಲ್ಲಿ 3 ಸಿಕ್ಸರ್, 4 ಬೌಂಡರಿಗಳಿದ್ದವು. ಈ ಮೂಲಕ ರಾಹುಲ್ ಟೀಕಾಕಾರಿಗೆ ಬ್ಯಾಟ್ ಎತ್ತುವ ಮೂಲಕವೇ ಉತ್ತರ ನೀಡಿದರು. ಕೊನೆಗೆ ದೊಡ್ಡ ಹೊಡೆತಕ್ಕೆ ಮುಂದಾಗಿ ಹೇಜಲ್ವುಡ್ಗೆ ವಿಕೆಟ್ ಒಪ್ಪಿಸಿದರು.