ಕರ್ನಾಟಕ

karnataka

ETV Bharat / sports

Ind vs Aus ಅಭ್ಯಾಸ ಪಂದ್ಯ: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ - ಐಸಿಸಿ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ

ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಕಳೆದ ಪಂದ್ಯ ಮಿಸ್ ಮಾಡಿಕೊಂಡಿದ್ದ ವರುಣ್ ಚಕ್ರವರ್ತಿ ಈ ಪಂದ್ಯದಲ್ಲಿ ಆಡುತ್ತಿದ್ದಾರೆ.

India vs Australia warm up match
Ind vs Aus ಅಭ್ಯಾಸ ಪಂದ್ಯ

By

Published : Oct 20, 2021, 3:20 PM IST

ದುಬೈ: ಟಿ20 ವಿಶ್ವಕಪ್​ ಸಿದ್ಧತೆಗಾಗಿ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್​​ ಗೆದ್ದ ಆಸ್ಟ್ರೇಲಿಯಾದ ನಾಯಕ ಆ್ಯರೋನ್ ಫಿಂಚ್ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ಜೋಶ್​ ಹೆಜಲ್​ವುಡ್​, ಮಿಚೆಲ್ ಸ್ವೆಪ್​ಸನ್​ ಮತ್ತು ಜೋಸ್ ಇಂಗ್ಲಿಸ್ ಬಿಟ್ಟು ಉಳಿದೆಲ್ಲಾ ಆಟಗಾರರು ಆಡಲಿದ್ದಾರೆ.

ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಕಳೆದ ಪಂದ್ಯ ಮಿಸ್ ಮಾಡಿಕೊಂಡಿದ್ದ ವರುಣ್ ಚಕ್ರವರ್ತಿ ಈ ಪಂದ್ಯದಲ್ಲಿ ಆಡುತ್ತಿದ್ದಾರೆ.

ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯ ಸಾಧಿಸಿದ್ದರೆ, ಭಾರತ 7 ವಿಕೆಟ್​ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿತ್ತು.

ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರಿಷಭ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್, ವರುಣ್ ಚಕರವರ್ತಿ

ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೀ), ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ಸನ್, ಆಡಮ್ ಜಂಪಾ, ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್

ABOUT THE AUTHOR

...view details