ಲಂಡನ್: ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ ಶತಕ (129) ಶತಕ ಸಿಡಿಸಿರುವ ಕನ್ನಡಿಗ ಕೆ.ಎಲ್.ರಾಹುಲ್ 'ಪಂದ್ಯಶ್ರೇಷ್ಠ ಪ್ರಶಸ್ತಿ'ಗೆ ಭಾಜನರಾದರು. ಇದೀಗ ಕ್ರೀಡಾಂಗಣದಲ್ಲಿರುವ ಗೌರವ ಸದಸ್ಯರ ಪಟ್ಟಿಯ ಫಲಕದಲ್ಲಿ ರಾಹುಲ್ ಹೆಸರು ರಾರಾಜಿಸುತ್ತಿದೆ.
ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ರಾಹುಲ್ 129 ರನ್‌ಗಳ ಶತಕದಾಟದ ಮೂಲಕ ತಂಡದ ಗೆಲುವಿಗೆ ಉಪಯುಕ್ತ ಕಾಣಿಕೆ ನೀಡಿದ್ದರು. ನಿನ್ನೆಯ ಪಂದ್ಯದಲ್ಲಿ ಆಂಗ್ಲರನ್ನು ಬಗ್ಗು ಬಡಿದಿದ್ದ ಕೊಹ್ಲಿ ಪಡೆ 151 ರನ್‌ಗಳ ರೋಚಕ ಗೆಲುವು ಸಾಧಿಸಿ, 5 ಪಂದ್ಯಗಳ ಸರಣಿಯಲ್ಲಿ 1-0 ಅಂತರ ಮುನ್ನಡೆ ಕಾಯ್ದುಕೊಂಡಿದೆ.