ಲಂಡನ್:ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಅತಿಥೇಯ ಇಂಗ್ಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಕ್ರಿಕೆಟ್ ಕಾಶಿ ಎಂದೇ ಖ್ಯಾತಿ ಪಡೆದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಇಂದಿನಿಂದ 2ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ್ದ ಜ್ಯಾಕ್ ಕ್ರಾಲಿ ಬದಲಿಗೆ ಹಸೀಮ್ ಹಮೀದ್ , ಲಾರೆನ್ಸ್ ಬದಲಿಗೆ ಮೊಯೀನ್ ಅಲಿ ಮತ್ತು ಗಾಯಾಳು ಸ್ಟುವರ್ಟ್ ಬದಲಿಗೆ ಮಾರ್ಕ್ವುಡ್ ಇಂಗ್ಲೆಂಡ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ.
ಭಾರತ ಕೂಡ ಒಂದು ಬದಲಾವಣೆ ಮಾಡಿಕೊಂಡಿದೆ. ಗಾಯಾಳು ಶಾರ್ದೂಲ್ ಠಾಕೂರ್ ಬದಲಿಗೆ ಅನುಭವಿ ಇಶಾಂತ್ ಶರ್ಮಾ ತಂಡದಲ್ಲಿ ಅವಕಾಶ ಪಡೆದಿದ್ದಾರೆ.