ನಾಟಿಂಗ್ಹ್ಯಾಮ್: ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಇಂದಿನಿಂದ ಆರಂಭವಾಗುತ್ತಿದ್ದು, ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ಸ್ಟೇಡಿಯಂನಲ್ಲಿ 2ನೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಮೊದಲ ಪಂದ್ಯ ಆರಂಭವಾಗುತ್ತಿದೆ. ಅಂಕ ಪಟ್ಟಿಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕಳೆದ ಆವೃತ್ತಿಯಂತೆ ಸರಣಿಗೆ ಅಂಕಗಳನ್ನು ನೀಡದೆ, ಪ್ರತಿಯೊಂದು ಪಂದ್ಯಕ್ಕೂ ಅಂಕವನ್ನು ನೀಡಲಾಗುತ್ತಿದೆ.
ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಕಣಕ್ಕಿಳಿಯುತ್ತಿದ್ದು, ಅವರು 2 ವರ್ಷಗಳ ಬಳಿಕ ಟೆಸ್ಟ್ ತಂಡಕ್ಕೆ ಮರಳುತ್ತಿದ್ದಾರೆ. 2019ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಮೊದಲ ಟೂರ್ನಮೆಂಟ್ನಲ್ಲಿ ಅವರು ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು.