ಮುಂಬೈ:ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಮುಂಬೈನ ವಾಖೆಂಡೆ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್, ಕನ್ನಡಿಗ ಮಯಾಂಕ್ ಅಗರವಾಲ್ ಜವಾಬ್ದಾರಿಯುತ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಶತಕ ಬಾರಿಸಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆದುಕೊಂಡಿತು. ಆರಂಭಿಕರಾಗಿ ಮೈದಾನಕ್ಕಿಳಿದ ಮಯಾಂಕ್ ಹಾಗೂ ಶುಬ್ಮನ್ ತಂಡಕ್ಕೆ 80ರನ್ಗಳ ಉತ್ತಮ ಅಡಿಪಾಯ ಹಾಕಿದರು.
ಆದರೆ, 44 ರನ್ಗಳಿಕೆ ಮಾಡಿದ್ದ ವೇಳೆ ಗಿಲ್ ಎಡಗೈ ಸ್ಪಿನ್ನರ್ ಅಜಾಜ್ ಪಟೇಲ್ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಪೂಜಾರಾ ಹಾಗೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ತಂಡವನ್ನ ಸಂಕಷ್ಟಕ್ಕೆ ದೂಡಿದರು. ಈ ವೇಳೆ ಶ್ರೇಯಸ್ ಅಯ್ಯರ್ ಹಾಗೂ ವೃದ್ಧಿಮಾನ್ ಸಾಹಾ ಜೊತೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಮಯಾಂಕ್ ಶತಕ ಸಿಡಿಸಿ ಮಿಂಚಿದರು.