ರಾಂಚಿ(ಜಾರ್ಖಂಡ್):ಪ್ರವಾಸಿ ನ್ಯೂಜಿಲ್ಯಾಂಡ್ (India vs New Zealand) ವಿರುದ್ಧದ ಎರಡನೇ ಟಿ20 ಪಂದ್ಯಕ್ಕಾಗಿ ಟೀಂ ಇಂಡಿಯಾ ಹರ್ಷಲ್ ಪಟೇಲ್ಗೆ ಮಣೆ ಹಾಕಿದೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ಪರ ಬೌಲಿಂಗ್ನಲ್ಲಿ ಮಿಂಚು ಹರಿಸಿರುವ ಈ ವೇಗದ ಬೌಲರ್ ತಮ್ಮ 31ನೇ ವಯಸ್ಸಿನಲ್ಲಿ ಟೀಂ ಇಂಡಿಯಾ ಸೇರಿದ್ದಾರೆ.
2021ರ ಐಪಿಎಲ್ನಲ್ಲಿ ತಮ್ಮ ಮೊಣಚಾದ ಬೌಲಿಂಗ್ ಕೌಶಲ್ಯದಿಂದಾಗಿ ಎದುರಾಳಿ ತಂಡಕ್ಕೆ ಮಾರಕವಾಗಿದ್ದ ಹರ್ಷಲ್ ಪಟೇಲ್ (Harshal Patel), ಅತಿ ಹೆಚ್ಚು ವಿಕೆಟ್ ಪಡೆದುಕೊಂಡು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಟೀಂ ಇಂಡಿಯಾ ಈ ಆಟಗಾರನಿಗೆ ಮಣೆ ಹಾಕಿ, ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಿತ್ತು. ಮೊದಲ ಪಂದ್ಯದಲ್ಲಿ ಅವಕಾಶ ವಂಚಿತರಾಗಿದ್ದ ಈ ಬೌಲರ್ ಇದೀಗ ಎರಡನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಗಾಯಗೊಂಡಿರುವ ಕಾರಣ ಅವರ ಸ್ಥಾನದಲ್ಲಿ ಹರ್ಷಲ್ ಪಟೇಲ್ ಕಣಕ್ಕಿಳಿದಿದ್ದಾರೆ.
ಅತಿ ಹೆಚ್ಚು ವಯಸ್ಸಿನೊಂದಿಗೆ ಟೀಂ ಇಂಡಿಯಾ (Team India) ಪರ ಟಿ-20 ಕ್ರಿಕೆಟ್ಗೆ ಪದಾರ್ಪಣೆ ಮಾಡಿರುವ ಆಟಗಾರ ಎಂಬ ಹೆಗ್ಗಳಿಕೆಗೂ ಈ ಪ್ಲೇಯರ್ ಕಾರಣವಾಗಿದ್ದಾರೆ.