ಜೋಹಾನ್ಸ್ಬರ್ಗ್(ದಕ್ಷಿಣ ಆಫ್ರಿಕಾ):ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ನಲ್ಲಿ ದಿಢೀರ್ ಕುಸಿತ ಕಂಡಿದೆ. ಭೋಜನ ವಿರಾಮದ ವೇಳೆಗೆ 6 ವಿಕೆಟ್ ಕಳೆದುಕೊಂಡು 188 ರನ್ ಗಳಿಕೆ ಮಾಡಿದ್ದು, 161ರನ್ಗಳ ಮುನ್ನಡೆ ಪಡೆಯಿತು.
ನಿನ್ನೆ 85 ರನ್ಗಳಿಸುವಷ್ಟರಲ್ಲಿ ಪ್ರಮುಖ ಎರಡು ವಿಕೆಟ್ ಕಳೆದುಕೊಂಡಿದ್ದ ಭಾರತ ಇಂದು ಬ್ಯಾಟಿಂಗ್ ಮುಂದುವರೆಸಿತು. 35 ರನ್ಗಳಿಕೆ ಮಾಡಿದ್ದ ಪೂಜಾರಾ ಹಾಗೂ 11 ರನ್ ಗಳಿಕೆ ಮಾಡಿದ್ದ ರಹಾನೆ ಇಂದು ಬ್ಯಾಟಿಂಗ್ ಮುಂದುವರೆಸಿದರು. ಈ ಜೋಡಿ ಆರಂಭದಲ್ಲಿ ದಕ್ಷಿಣ ಆಫ್ರಿಕಾ ಬೌಲರ್ಗಳನ್ನು ಸುಲಭವಾಗಿ ಎದುರಿಸಿ, ಶತಕದಾಟದ ಜೊತೆಯಾಟ ಆಡಿದರು.
ರಬಾಡಾಗೆ ಬಲಿಯಾದ ಪೂಜಾರಾ-ರಹಾನೆ:
53 ರನ್ಗಳಿಕೆ ಮಾಡಿ ಬ್ಯಾಟ್ ಮಾಡ್ತಿದ್ದ ವೇಳೆ ಚೇತೇಶ್ವರ್ ಪೂಜಾರಾ ವೇಗಿ ರಬಾಡಾ ಬೌಲಿಂಗ್ನಲ್ಲಿ ಎಲ್ಬಿ ಬಲೆಗೆ ಬಿದ್ದರೆ, 58 ರನ್ಗಳಿಕೆ ಮಾಡಿದ್ದ ರಹಾನೆ ಕೂಡ ಅದೇ ಓವರ್ನಲ್ಲಿ ವಿಕೆಟ್ ಒಪ್ಪಿಸಿದರು. ಆ ಬಳಿಕ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ರಬಾಡಾ ಓವರ್ನಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.