ದುಬೈ: ಏಷ್ಯಾ ಕಪ್ ಟೂರ್ನಿಯ ಸೂಪರ್ 4 ಹಂತದ ಭಾರತ ವಿರುದ್ಧ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ದುಕೊಂಡಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯದಲ್ಲಿ ಭಾರತ ಫೈನಲ್ಗೇರಬೇಕಾದರೆ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಬೃಹತ್ ಮೊತ್ತ ಗಳಿಸಿದಾಗ್ಯೂ 5 ವಿಕೆಟ್ಗಳ ಸೋಲುಂಡ ಬಳಿಕ ಭಾರತದ ಮೇಲೆ ಒತ್ತಡ ಹೆಚ್ಚಿದೆ. ಇದರಿಂದ ಶ್ರೀಲಂಕಾ ವಿರುದ್ಧದ ಈ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಇನ್ನು ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ಶ್ರೀಲಂಕಾ ಭಾರತದ ವಿರುದ್ಧ ಕಮಾಲ್ ಮಾಡುವ ಹುಮ್ಮಸ್ಸಿನಲ್ಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಫೈನಲ್ ಹಾದಿಯನ್ನು ಸುಲಭ ಮಾಡಿಕೊಳ್ಳುವ ಪ್ಲಾನ್ ಮಾಡಿದೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು, ರವಿ ಬಿಷ್ಣೋಯ್ ಬದಲಾಗಿ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಪಾಕ್ ಪಂದ್ಯದಲ್ಲಿ ಕ್ಯಾಚ್ ಬಿಟ್ಟು ಟೀಕೆಗೆ ಗುರಿಯಾಗಿದ್ದ ಯುವ ಬೌಲರ್ ಅರ್ಷದೀಪ್ ಸಿಂಗ್ಗೆ ಮತ್ತೊಂದು ಅವಕಾಶ ನೀಡಲಾಗಿದೆ. ಅಫ್ಘಾನಿಸ್ತಾನ ವಿರುದ್ಧ ಆಡಿದ ಹನ್ನೊಂದರ ಬಳಗವನ್ನೇ ಲಂಕಾ ತಂಡ ಉಳಿಸಿಕೊಂಡಿದೆ.
ತಂಗಳು ಇಂತಿವೆ-ಭಾರತ:ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯಾ, ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ಯಜುವೇಂದ್ರ ಚಹಲ್, ಅರ್ಷದೀಪ್ ಸಿಂಗ್.
ಶ್ರೀಲಂಕಾ:ಪಾತುಮ್ ನಿಸ್ಸಂಕ, ಕುಶಾಲ್ ಮೆಂಡಿಸ್, ಚರಿತ ಅಸಲಂಕ, ದನುಷ್ಕ ಗುಣತಿಲಕ, ಬನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಅಸಿತ ಫೆರ್ನಾಂಡೊ, ದಿಲ್ಶನ್ ಮಧುಶಂಕ.
ಓದಿ:ಧೋನಿ ಮಾತ್ರವಲ್ಲ, ಸಂಪರ್ಕಿಸದವರ ಹೆಸರನ್ನು ಹೇಳಬೇಕಿತ್ತು..ಕೊಹ್ಲಿ ಹೇಳಿಕೆಗೆ ಸುನಿಲ್ ಗವಾಸ್ಕರ್ ಬೇಸರ