ಲೀಡ್ಸ್(ಇಂಗ್ಲೆಂಡ್): ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಹೀಗಾಗಿ ಸೋಲಿನ ಸುಳಿಗೆ ಬಂದು ನಿಂತಿದೆ. ಇದೇ ವಿಚಾರವಾಗಿ ಮಾತನಾಡಿರುವ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮೈಕಲ್ ವಾನ್, ಈ ಟೆಸ್ಟ್ನಲ್ಲಿ ಭಾರತ ಸೋಲು ಕಾಣಲಿದೆ. ಆದರೆ, ಎರಡನೇ ಇನ್ನಿಂಗ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಅವಕಾಶವಿದೆ ಎಂದಿದ್ದಾರೆ.
ಇಂಗ್ಲೆಂಡ್ ಬೌಲಿಂಗ್ ದಾಳಿಗೆ ಸಂಪೂರ್ಣವಾಗಿ ತತ್ತರಿಸಿ ಹೋದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 78 ರನ್ಗಳಿಗೆ ಆಲೌಟ್ ಆಗಿದೆ. ಇದಕ್ಕೆ ಪ್ರತ್ಯುತ್ತರವಾಗಿ ಇಂಗ್ಲೆಂಡ್ ತಂಡ ಎರಡನೇ ದಿನದಾಟದ ಅಂತ್ಯಕ್ಕೆ 8 ವಿಕೆಟ್ನಷ್ಟಕ್ಕೆ 423ರನ್ಗಳಿಕೆ ಮಾಡಿದ್ದು, 345ರನ್ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ.
ಬ್ಯಾಟಿಂಗ್ನಲ್ಲಿ ಸಂಪೂರ್ಣವಾಗಿ ವೈಫಲ್ಯ ಅನುಭವಿಸಿರುವ ರೋಹಿತ್ ಶರ್ಮಾ, ರಹಾನೆ, ಪೂಜಾರಾ, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲ ಬ್ಯಾಟ್ಸ್ಮನ್ಗಳು ಇದೀಗ ಎರಡನೇ ಇನ್ನಿಂಗ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡಿ, ಮುಂದಿನ ಪಂದ್ಯಕ್ಕೆ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇದೇ ವಿಚಾರವಾಗಿ ವಾನ್ ಮಾತನಾಡಿದ್ದು, ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಾಣಲಿದೆ ಎಂದಿದ್ದಾರೆ.
ಇದನ್ನೂ ಓದಿರಿ: ಇನ್ಸ್ಟಾದಲ್ಲಿ ಮುಖ ಮರೆಮಾಚಿದ ಸೆಲ್ಫಿ ಹಾಕಿರುವ ಸ್ಯಾಂಡಲ್ವುಡ್ ಕ್ವೀನ್ : ಅತ್ಯಾಚಾರದ ವಿರುದ್ಧ ಕಿಡಿ
ಟೀಂ ಇಂಡಿಯಾ ಬ್ಯಾಟ್ಸ್ಮನ್ಗಳು ಸ್ಕೋರ್ಬೋರ್ಡ್ ಮರೆತು ಇದೀಗ ಬ್ಯಾಟಿಂಗ್ ನಡೆಸಬೇಕಾಗಿದ್ದು, ವೈಯಕ್ತಿಕವಾಗಿ ಉತ್ತಮ ರನ್ಗಳಿಕೆ ಮಾಡುವುದರಿಂದ ಮುಂದಿನ ಪಂದ್ಯಕ್ಕೆ ಸಹಕಾರಿಯಾಗಲಿದೆ ಎಂದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಭಾಗಿಯಾಗಿದ್ದು, ಈಗಾಗಲೇ ಕೊಹ್ಲಿ ಪಡೆ 1-0 ಅಂತರದಲ್ಲಿ ಮುನ್ನಡೆ ಪಡೆದುಕೊಂಡಿದೆ.