ಜೈಪುರ: ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅಧಿಕೃತ ಭಾರತ ತಂಡದ ನಾಯಕನಾಗಿದ್ದರೆ, ರಾಹುಲ್ ದ್ರಾವಿಡ್ ಅವರಿಗೆ ಕೋಚ್ ಆಗಿ ಇದೇ ಮೊದಲ ಪಂದ್ಯವಾಗಿದೆ. ಇನ್ನು ಈ ಪಂದ್ಯದಲ್ಲಿ ಐಪಿಎಲ್ ಸ್ಟಾರ್ ವೆಂಕಟೇಶ್ ಅಯ್ಯರ್ ಪದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಮಾರ್ಚ್ನಲ್ಲಿ ಗಾಯಗೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ದೂರ ಉಳಿದಿದ್ದ ಶ್ರೇಯಸ್ ಅಯ್ಯರ್ ಸೇರಿದಂತೆ ಅಕ್ಷರ್ ಪಟೇಲ್ ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್ ಕಮ್ಬ್ಯಾಕ್ ಮಾಡಿದ್ದಾರೆ. ಆದರೆ ಯುಜ್ವೇಂದ್ರ ಚಹಾಲ್ ಈ ಪಂದ್ಯದಲ್ಲೂ ಅವಕಾಶ ವಂಚಿತರಾಗಿದ್ದಾರೆ.
ಇತ್ತ ನ್ಯೂಜಿಲ್ಯಾಂಡ್ ತಂಡದಲ್ಲಿ ಕೇನ್ ವಿಲಿಯಮ್ಸನ್ ಬದಲಿಗೆ ಟಿಮ್ ಸೌಥಿ ನಾಯಕನಾಗಿದ್ದಾರೆ. ಆಲ್ರೌಂಡರ್ ನೀಶಮ್, ಸೋಧಿ ಮತ್ತು ಮಿಲ್ನೆ ಹೊರಗುಳಿದಿದ್ದರೆ, ಲಾಕಿ ಫರ್ಗ್ಯುಸನ್, ಟಾಪ್ ಆಸ್ಟಲ್, ರಚಿನ್ ರವೀಂದ್ರ ಮತ್ತು ಮಾರ್ಕ್ ಚಾಪ್ಮನ್ ಆಡುತ್ತಿದ್ದಾರೆ.
ನ್ಯೂಜಿಲೆಂಡ್ (ಪ್ಲೇಯಿಂಗ್ XI): ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್ (ವಿಕೀ), ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ (ನಾಯಕ), ಟಾಡ್ ಆಸ್ಟಲ್, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಭಾರತ (ಆಡುವ XI): ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೀ), ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್