ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಡಿಗೆ ಮತ್ತೊಂದು ಗರಿ ಸೇರಿಸಿಕೊಂಡಿದೆ. ವಿಶ್ವ ವಿಖ್ಯಾತ ದುಬೈನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ರನ್ಮಷಿನ್ ಮೇಣದ ಪ್ರತಿಮೆಯನ್ನು ಸೋಮವಾರ ಅನಾವರಣಗೊಳಿಸಲಾಗಿದೆ.
ವಿಶ್ವ ಕ್ರಿಕೆಟ್ನ ಅತ್ಯಂತ ಜನಪ್ರಿಯ ಕ್ರಿಕೆಟಿಗರಲ್ಲಿ ಅಗ್ರಗಣ್ಯನಾಗಿರುವ ಭಾರತೀಯ ನಾಯಕ ಪ್ರಸ್ತುತ ಯುಎಇಯಲ್ಲಿದ್ದು, ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಭಾರತ ತಂಡ ಸೋಮವಾರ ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯವನ್ನಾಡುವ ವೇಳೆ ಈ ಮೇಣದ ಪ್ರತಿಮೆ ಅನಾವರಣ ಮಾಡಲಾಗಿದೆ.
ಭಾರತ ತಂಡದ ನಾಯಕನ ಮೇಣದ ಪ್ರತಿಮೆ ಈ ಫೋಟೋ ಸಾಮಾಜಿಕ ಜಾಲಾತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನ ಪ್ರತಿಮೆ ಚಿತ್ರವನ್ನು ತಮ್ಮದೇ ಆದ ಶೀರ್ಷಿಕೆಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ.