ಸೌತಾಂಪ್ಟನ್: ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೂ ಮುನ್ನ ತಮ್ಮಲ್ಲೇ ಎರಡು ತಂಡಗಳನ್ನು ಮಾಡಿಕೊಂಡು ಇಂದಿನಿಂದ ಅಭ್ಯಾಸ ಆರಂಭಿಸಿದೆ. 10 ದಿನಗಳ ಕ್ವಾರಂಟೈನ್ನಲ್ಲಿರುವ ಕೊಹ್ಲಿ ಪಡೆದ ಹೋಟೆಲ್ಗೆ ಹತ್ತಿರ ಇರುವ ಹ್ಯಾಂಪ್ಷೈರ್ ಬೌಲ್ ಮೈದಾನದಲ್ಲಿ ಅಭ್ಯಾಸ ಪಂದ್ಯವನ್ನಾಡಿದೆ.
ಶುಕ್ರವಾರ ನಡೆದ ಅಭ್ಯಾಸ ಪಂದ್ಯದ ವಿಡಿಯೋವನ್ನು ಶನಿವಾರ ಬಿಸಿಸಿಐ ತನ್ನ ಸಾಮಾಜಿಕ ಜಾಲಾತಾಣಗಳಲ್ಲಿ ಬಿಡುಗಡೆ ಮಾಡಿಕೊಂಡಿದೆ. ಈ ವಿಡಿಯೋದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್ ಬ್ಯಾಟಿಂಗ್ ಮಾಡುತ್ತಿರುವುದು ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಆಕರ್ಷಕ ಸಿಕ್ಸರ್ ಬಾರಿಸಿದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.