ನವದೆಹಲಿ: ಭಾರತ ತಂಡದ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರ ಬೌಲಿಂಗ್ ಮುಂದೆ ಬ್ಯಾಟರ್ಗಳು ಮಂಡಿಯೂರಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉಮ್ರಾನ್ ವಿಶೇಷ ದಾಖಲೆ ಹೊಂದಿದ್ದಾರೆ. 156 ಕೀಲೋ ವೀಟರ್ ವೇಗದಲ್ಲಿ ಬೌಲಿಂಗ್ ಮಾಡುವ ಮಲಿಕ್, ಭಾರತದ ತಂಡದ ಅತೀ ಹೆಚ್ಚು ವೇಗದಲ್ಲಿ ಮಾಡಿದ ಬೌಲರ್ ಎಂಬ ಖ್ಯಾತಿಗೆ ಒಳಗಾಗಿದ್ದಾರೆ. 151 km ನಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದಿದ್ದ ಅವರು, ತಮ್ಮ ದಾಖಲೆಯನ್ನೆ ಮುರಿದು ಇತಿಹಾಸ ನಿರ್ಮಿಸಿದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 17, 19 ಮತ್ತು 22ಕ್ಕೆ ಮೂರು ಏಕದಿನ ಪಂದ್ಯಗಳು ನಡೆಯಲಿದೆ. ಈ ಸರಣಿಗೆ ಮಲಿಕ್ ಆಯ್ಕೆಯಾಗಿದ್ದಾರೆ. ಈ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಉಮ್ರಾನ್ ಮಲಿಕ್ ಈ ಟೂರ್ನಿಗೆ ತಯಾರಿಯಲ್ಲಿ ನಿರತರಾಗಿದ್ದಾರೆ. ಅವರು ಇದರ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ, ಇದರಲ್ಲಿ ಉಮ್ರಾನ್ ಮೈದಾನದಲ್ಲಿ ಅಭ್ಯಾಸ ಮಾಡುತ್ತಿರುವುದನ್ನು ಕಾಣಬಹುದಾಗಿದೆ. 19ರಂದು ವಿಶಾಖಪಟ್ಟಣಂನಲ್ಲಿ ಎರಡನೇ ಏಕದಿನ ಪಂದ್ಯ ಮತ್ತು 22ರಂದು ಮೂರನೇ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ.
ಟೀಂ ಇಂಡಿಯಾ ವೇಗದ ಬೌಲರ್ ಉಮ್ರಾನ್ ಮಲಿಕ್ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಉಮ್ರಾನ್ ಮೈದಾನದಲ್ಲಿ ಅಭ್ಯಾಸ ಮಾಡುತ್ತಿರುವುದನ್ನು ಕಾಣಬಹುದು. ಇದರೊಂದಿಗೆ ಉಮ್ರಾನ್ ತಮ್ಮ ಫಿಟ್ನೆಸ್ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ. ಮೈದಾನದ ಹೊರತಾಗಿ ಜಿಮ್‌ನಲ್ಲೂ ಉಮ್ರಾನ್ ಬೆವರು ಸುರಿಸುತ್ತಿದ್ದಾರೆ. ಉಮ್ರಾನ್ ಪಿಚ್ನಲ್ಲಿ ಮತ್ತು ಜಿಮ್‌ನಲ್ಲಿ ಕಷ್ಟಪಟ್ಟು ತಯಾರಿ ನಡೆಸುತ್ತಿದ್ದಾರೆ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಉಮ್ರಾನ್‌ಗೆ ಅವಕಾಶ ಸಿಗಲಿಲ್ಲ, ಆದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ತಂಡಕ್ಕೆ ಸೇರಿದ್ದಾರೆ.
ಇದನ್ನೂ ಓದಿ:ನಾಳೆ ವನಿತೆಯರ ವಿಶ್ವಕಪ್ ಅಂತಿಮ ಹಣಾಹಣಿ: ಮೊದಲ ಕಪ್ ಗೆಲ್ಲುವ ತವಕದಲ್ಲಿ ಹರಿಣಗಳ ಪಡೆ