ಕರ್ನಾಟಕ

karnataka

ETV Bharat / sports

U-19 ವಿಶ್ವಕಪ್ ಗೆದ್ದ ಭಾರತ: ಆಟಗಾರರಿಗೆ 40 ಲಕ್ಷ ರೂ. ಬಹುಮಾನ ಘೋಷಿಸಿದ ಬಿಸಿಸಿಐ - BCCI president Sourav Ganguly announces cash prize to u19players

ಅಂಡರ್ 19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ನಗದು ಬಹುಮಾನ ನೀಡುವುದಾಗಿ ಬಿಸಿಸಿಐ ಘೋಷಿಸಿದೆ.

BCCI announces reward of 40 lacs per player
BCCI announces reward of 40 lacs per player

By

Published : Feb 6, 2022, 2:32 AM IST

ನವದೆಹಲಿ: ಅಂಡರ್ 19 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಯ ಮಹಾಪೂರ ಹರಿದುಬರುತ್ತಿದೆ. ಇನ್ನು ತಂಡಕ್ಕೆ ಬಿಸಿಸಿಐ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.

ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಕಿರಿಯರು ಗೆಲ್ಲುತ್ತಿದ್ದಂತೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ. ಜೊತೆಗೆ ತಂಡಕ್ಕೆ ನಗದು ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.

ಅಂಡರ್ 19 ವಿಶ್ವಕಪ್ ಗೆದ್ದ ತಂಡದ ಆಟಗಾರರು, ತಂಡದ ಸಿಬ್ಬಂದಿ ಹಾಗೂ ಆಯ್ಕೆಗಾರರಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಆಟಗಾರರಿಗೆ ತಲಾ 40 ಲಕ್ಷ ರೂ ಹಾಗೂ ತಂಡದ ಸಿಬ್ಬಂದಿಗೆ ತಲಾ 25 ಲಕ್ಷ ರೂ. ನಗದು ಹಣ ನೀಡುವುದಾಗಿ ಪ್ರಕಟಿಸಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜೆ ಶಾ ಕೂಡ ಅಭಿನಂದಿಸಿದ್ದಾರೆ. ವಿಶ್ವಕಪ್​ನಲ್ಲಿ ತಂಡ ಅದ್ಭುತ ಪ್ರದರ್ಶನ ನೀಡಿದೆ. ನೀವು ಭಾರತ ಹೆಮ್ಮೆ ಪಡುವಂತೆ ಮಾಡಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ.

ಆಂಟಿಗುವಾದಲ್ಲಿ ನಡೆದ ವಿಶ್ವಕಪ್ ಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 47.4 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು. ಈ ಮೂಲಕ ದಾಖಲೆಯ 5ನೇ ಬಾರಿ ವಿಶ್ವ ಚಾಂಪಿಯನ್ ಪಟ್ಟ ಧರಿಸಿತು.

(ಇದನ್ನೂ ಓದಿ: U-19 ವಿಶ್ವಕಪ್: 5ನೇ ಬಾರಿ ಚಾಂಪಿಯನ್ ಪಟ್ಟ ಗೆದ್ದ ಭಾರತದ ಕಿರಿಯರು)

ABOUT THE AUTHOR

...view details