ಕರ್ನಾಟಕ

karnataka

ETV Bharat / sports

ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್​ಗೆ ಮತ್ತೆ ಗಾಯ; ಕಿವೀಸ್​ ಸರಣಿಯಿಂದ ಔಟ್ - ಇಸಿಬಿ

ಜೋಫ್ರಾ ಆರ್ಚರ್​ ಕೌಂಟಿ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 29 ರನ್‌ಗಳಿಗೆ 2 ವಿಕೆಟ್ ಪಡೆದು ಮಿಂಚಿದ್ದರು. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 5 ಓವರ್ ಬೌಲಿಂಗ್ ಮಾಡಿ, ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದರು.

ಜೋಫ್ರಾ ಆರ್ಚರ್
ಜೋಫ್ರಾ ಆರ್ಚರ್

By

Published : May 17, 2021, 9:01 AM IST

ಲಂಡನ್: ಗಾಯದಿಂದ ಚೇತರಿಸಿಕೊಂಡು ಕೌಂಟಿ ಕ್ರಿಕೆಟ್​ನಲ್ಲಿ ಪಾಲ್ಗೊಂಡಿದ್ದ ಇಂಗ್ಲೆಂಡ್ ತಂಡದ ವೇಗಿ​ ಜೋಫ್ರಾ ಆರ್ಚರ್​ಗೆ ಮತ್ತೊಮ್ಮೆ ಮೊಣಕೈ ನೋವು ಕಾಣಿಸಿಕೊಂಡಿದೆ. ಹಾಗಾಗಿ, ಜೂನ್​ ಮೊದಲ ವಾರದಲ್ಲಿ ನಡೆಯಲಿರುವ ನ್ಯೂಜಿಲ್ಯಾಂಡ್​ ವಿರುದ್ಧದ ಟೆಸ್ಟ್​ ಸರಣಿಯಿಂದ ಇವರನ್ನು ಕೈಬಿಡಲಾಗಿದೆ ಎಂದು ಇಸಿಬಿ ತಿಳಿಸಿದೆ.

ಸಸೆಕ್ಸ್​ ಪರ ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಕೆಂಟ್​ ವಿರುದ್ಧ ಆಡುವಾಗ ದೀರ್ಘಕಾಲ ಕಾಡಿದ್ದ ಮೊಣಕೈ ನೋವು ಅವರಿಗೆ ಮತ್ತೆ ಕಾಣಿಸಿಕೊಂಡಿದೆ. 26 ವರ್ಷದ ಈ ವೇಗಿ ಭಾರತದ ವಿರುದ್ಧ ಸರಣಿಯಲ್ಲಿ ಪಾಲ್ಗೊಂಡಿದ್ದ ವೇಳೆ ಹಳೆಯ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊನೆಯ 2 ಪಂದ್ಯಗಳಿಂದ ಹೊರಬಿದ್ದಿದ್ದರು. ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಐಪಿಎಲ್​ನಲ್ಲೂ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.

ಆರ್ಚರ್ ಅವರು​ ಕೌಂಟಿ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 29 ರನ್‌ಗಳಿಗೆ 2 ವಿಕೆಟ್ ಪಡೆದು ಮಿಂಚಿದ್ದರು. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 5 ಓವರ್ ಮಾತ್ರ ಬೌಲಿಂಗ್ ಮಾಡಿ, ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದರು.

ಇಂಗ್ಲೆಂಡ್​ ಹಾಗೂ ನ್ಯೂಜಿಲ್ಯಾಂಡ್​ ನಡುವಿನ ಮೊದಲ ಟೆಸ್ಟ್​ ಪಂದ್ಯ ಜೂನ್​ 2 ರಂದು ಲಾರ್ಡ್ಸ್ ಮೈದಾನದಲ್ಲಿ ಆರಂಭವಾಗಲಿದೆ.

ABOUT THE AUTHOR

...view details