ಇಂಗ್ಲೆಂಡ್:ಆತಿಥೇಯಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭಗೊಳ್ಳಲು ಕೆಲ ವಾರಗಳು ಬಾಕಿ ಉಳಿದಿದ್ದು, ಇದರ ಬೆನ್ನಲ್ಲೇ ಟೀಂ ಇಂಡಿಯಾ ತಂಡಕ್ಕೆ ಆಘಾತ ಎದುರಾಗಿದೆ. ಆರಂಭಿಕ ಆಟಗಾರ ಶುಬ್ಮನ್ ಗಿಲ್ ಗಾಯಗೊಂಡಿದ್ದು, ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಜಿಲ್ಯಾಂಡ್ ವಿರುದ್ಧ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದ ಶುಬ್ಮನ್ ಗಿಲ್, ಹೆಚ್ಚಿನ ಸ್ಕೋರ ದಾಖಲು ಮಾಡುವಲ್ಲಿ ವಿಫಲಗೊಂಡಿದ್ದರು. ಆದರೆ, ಇದೀಗ ಅವರು ಗಾಯಗೊಂಡಿದ್ದು, ಮೊದಲ ಟೆಸ್ಟ್ ಅಥವಾ ಸಂಪೂರ್ಣ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.