ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಭವಿ ಆಫ್ ಸ್ಪಿನ್ನರ್ ಅಶ್ವಿನ್ ರವಿಚಂದ್ರನ್ ಅಶ್ವಿನ್ ಐಸಿಸಿ ಕೊಡಮಾಡುವ ಪ್ರತಿಷ್ಠಿತ ಪುರುಷರ ಪ್ಲೇಯರ್ ಆಫ್ ದಿ ಡಿಕೇಡ್ ಪ್ರಶಸ್ತಿಗೆ ಮಂಗಳವಾರ ನಾಮನಿರ್ದೇಶನಗೊಂಡಿದ್ದಾರೆ. ಕಳೆದ 10 ವರ್ಷಗಳಲ್ಲಿನ ಅವರ ಸಾಧನೆ ಹಾಗೂ ಗಳಿಸಿ ರನ್ಗಳನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿಲಾಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯು ಮೂರು ಮಾದರಿಯ ಕ್ರಿಕೆಟ್‍ನಲ್ಲಿ ದಶಕದ ಆಟಗಾರ ಪ್ರಶಸ್ತಿಗೆ ಹಲವು ಆಟಗಾರರ ಹೆಸರನ್ನು ಪ್ರಸ್ತಾಪಿಸಿ ನಾಮನಿರ್ದೇಶನಗೊಳಿಸಿದ್ದು ಬಿಡುಗಡೆಯಾದ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ.
ಇದನ್ನೂ ಓದಿ:ಭಾರತ ತಂಡದಲ್ಲಿದ್ದಾರೆ ರೋಹಿತ್-ಕೊಹ್ಲಿ ಸ್ಥಾನ ತುಂಬಬಲ್ಲ ಆಟಗಾರರು: ಸ್ಟೀವ್ ಸ್ಮಿತ್
ಕೊಹ್ಲಿ ಮತ್ತು ಅಶ್ವಿನ್ ಸೇರಿದಂತೆ ಒಟ್ಟು ಏಳು ಆಟಗಾರರು ಪುರುಷರ ಪ್ಲೇಯರ್ ಆಫ್ ದಿ ಡಿಕೇಡ್ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಜೋ ರೂಟ್ (ಇಂಗ್ಲೆಂಡ್), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್), ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ), ಎಬಿ ಡಿವಿಲಿಯರ್ಸ್ (ದಕ್ಷಿಣ ಆಫ್ರಿಕಾ) ಮತ್ತು ಕುಮಾರ್ ಸಂಗಕ್ಕಾರ (ಶ್ರೀಲಂಕಾ) ಕೂಡ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.
ಪುರುಷರ ಏಕದಿನ ಪ್ಲೇಯರ್ ಆಫ್ ದಿ ಡಿಕೇಡ್ ವಿಭಾಗದಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ರನ್ ಮೆಷಿನ್ ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿ ಕೂಡ ಸ್ಥಾನ ಗಳಿಸಿಕೊಂಡಿದ್ದಾರೆ. ಇನ್ನು ಇದೇ ವಿಭಾಗದಲ್ಲಿ ಲಸಿತ್ ಮಾಲಿಂಗ (ಶ್ರೀಲಂಕಾ), ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ), ಡಿವಿಲಿಯರ್ಸ್ ಮತ್ತು ಸಂಗಕ್ಕಾರ ಸ್ಥಾನ ಪಡೆದಿದ್ದಾರೆ.
ಪುರುಷರ ಟಿ 20-ಐ ಪ್ಲೇಯರ್ ಆಫ್ ದಿ ಡಿಕೇಡ್ ವಿಭಾಗದಲ್ಲಿಯೂ ಸಹ ಕೊಹ್ಲಿ ಮತ್ತು ರೋಹಿತ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಟೀಂ ಇಂಟಿಯಾ ಹೊರೆತುಪಡಿಸಿ ಇದರಲ್ಲಿ ರಶೀದ್ ಖಾನ್ (ಅಫ್ಘಾನಿಸ್ತಾನ), ಇಮ್ರಾನ್ ತಾಹಿರ್ (ದಕ್ಷಿಣ ಆಫ್ರಿಕಾ), ಆರನ್ ಫಿಂಚ್ (ಆಸ್ಟ್ರೇಲಿಯಾ), ಮಾಲಿಂಗ ಮತ್ತು ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) ಕೂಡ ನಾಮನಿರ್ದೇಶನಗೊಂಡಿದ್ದಾರೆ.
ಇದನ್ನೂ ಓದಿ:ಫಿಟ್‌ನೆಸ್ ಕೊರತೆ: ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾದ ಇಬ್ಬರು ಅನುಭವಿ ಆಟಗಾರರು ಅಲಭ್ಯ
ಪುರುಷರ ಟೆಸ್ಟ್ ಪ್ಲೇಯರ್ ಆಫ್ ದಿ ದಶಕದ ಮತ್ತು ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿಗಳಲ್ಲಿಯೂ ಸಹ ಕೊಹ್ಲಿ ನಾಮನಿರ್ದೇಶನಗೊಂಡರೆ, ದಶಕದ ಪ್ರಶಸ್ತಿ ವಿಭಾಗದ ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿಯಲ್ಲಿ ಧೋನಿ ಹೆಸರನ್ನು ನಾಮನಿರ್ದೇಶನಗೊಳಿಸಲಾಗಿದೆ. ಒಟ್ಟು ಮೂರು ಮಾದರಿಯ ಕ್ರಿಕೆಟ್‍ನಲ್ಲಿ ದಶಕದ ಆಟಗಾರ ಪ್ರಶಸ್ತಿಗೆ ಹಲವು ಆಟಗಾರರ ಹೆಸರನ್ನು ಪ್ರಸ್ತಾಪಿಸಿ ನಾಮನಿರ್ದೇಶನಗೊಳಿಸಿದ್ದು ಬಿಡುಗಡೆಯಾದ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದಾರೆ.
ಎಲ್ಲಾ ಸ್ವರೂಪಗಳಲ್ಲಿ ಸರಾಸರಿ 50 ಕ್ಕಿಂತ ಹೆಚ್ಚು ಇರುವ ವಿರಾಟ್ ಕೊಹ್ಲಿ ಈಗಾಗಲೇ 70 ಶತಕಗಳನ್ನು ಸಿಡಿಸಿದ್ದಾರೆ. ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ (100) ಹಾಗೂ ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ರಿಕಿ ಪಾಂಟಿಂಗ್ (71) ದಾಖಲೆಯನ್ನು ಶೀಘ್ರದಲ್ಲೆ ತಲುಪಲಿದ್ದಾರೆ.