ಮುಂಬೈ:ಹರಿಣಗಳ ವಿರುದ್ಧದ ಟೆಸ್ಟ್ ಸರಣಿಗಾಗಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಇಂದು ಮುಂಬೈನಿಂದ ದಕ್ಷಿಣ ಆಫ್ರಿಕಾಗೆ ಪ್ರಯಾಣ ಬೆಳೆಸಿದೆ. ಡಿಸೆಂಬರ್ 26 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಕೊಹ್ಲಿ ನೇತೃತ್ವದ ತಂಡ ಮೊದಲ ಟೆಸ್ಟ್ ಪಂದ್ಯ ಆಡಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ - ಬಿಸಿಸಿಐ ಟೆಸ್ಟ್ ತಂಡ ಆಫ್ರಿಕಾಗೆ ತೆರಳುತ್ತಿರುವ ಫೋಟೋಗಳನ್ನು ಹಂಚಿಕೊಂಡಿದೆ. ಅಭ್ಯಾಸದ ವೇಳೆ ಗಾಯಗೊಂಡಿದ್ದ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಪಂದ್ಯಗಳಿಗೆ ರೋಹಿತ್ ಶರ್ಮಾ ಅವರ ಶಕ್ತಿಯನ್ನು ಟೀಂ ಇಂಡಿಯಾ ಮಿಸ್ ಮಾಡಿಕೊಳ್ಳಲಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಈಗಾಗಲೇ ಇಂಗ್ಲೆಂಡ್ ಸರಣಿಯಲ್ಲಿ ರೋಹಿತ್ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದ್ದಾರೆ ಎಂದಿದ್ದಾರೆ.
ಮಯಾಂಕ್ ಅಗರ್ವಾಲ್ ಹಾಗೂ ಕೆ.ಎಲ್.ರಾಹುಲ್‌ಗೆ ಆರಂಭಿಕರಾಗಿ ಕಣಕ್ಕಿಳಿಯುವ ಅವಕಾಶ ಸಿಕ್ಕಿದೆ. ಈ ಸರಣಿಯಲ್ಲಿ ಇವರ ಉತ್ತಮ ಕಾಣಿಕೆ ನೀಡಲಿದ್ದಾರೆ ಎಂದು ವಿರಾಟ್ ವಿಶ್ವಾಸ ವ್ಯಕ್ತಪಡಿಸಿದರು. ರೋಹಿತ್ ಅಲಭ್ಯ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಪ್ರಿಯಾಂಕ್ ಪಾಂಚಾಲ್‌ರನ್ನು ಸೇರಿಸಿಕೊಳ್ಳಲಾಗಿದೆ.
ದಕ್ಷಣಿ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೆ ಭಾರತದ ತಂಡ: ವಿರಾಟ್ ಕೊಹ್ಲಿ (ನಾಯಕ), ಪ್ರಿಯಾಂಕ್ ಪಾಂಚಲ್, ಕೆ.ಎಲ್.ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿವಾರಿ, ರಿಷಬ್ ಪಂತ್(ವಿ.ಕೀ), ವೃದ್ಧಿಮಾನ್ ಸಾಹ (ವಿ.ಕೀ), ಆರ್.ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರಿತ್ ಬೂಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ:ಹರಿಣಗಳ ನಾಡಲ್ಲಿ ಟೀಂ ಇಂಡಿಯಾ ಗೆದ್ದಿಲ್ಲ ಟೆಸ್ಟ್ ಸರಣಿ.. ಕೊಹ್ಲಿ ಪಡೆ ನಿರ್ಮಿಸುತ್ತಾ ಹೊಸ ಇತಿಹಾಸ?