ಕಾನ್ಪುರ್:ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಟೀಂ ಇಂಡಿಯಾದ ಭರವಸೆಯ ಬ್ಯಾಟರ್ ಶ್ರೇಯಸ್ ಅಯ್ಯರ್ ಹೊಸದೊಂದು ದಾಖಲೆ ಬರೆದಿದ್ದಾರೆ.
Shreyas Iyer Record in Test Debut: ಕಾನ್ಪುರದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಶತಕ ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ ಅರ್ಧ ಶತಕ ಸಿಡಿಸಿದ್ದಾರೆ. ಈ ಮೂಲಕ ಪಾದಾರ್ಪಣೆ ಪಂದ್ಯದಲ್ಲೇ ಶತಕ, ಅರ್ಧಶತಕ ಸಿಡಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 10 ನೇ ಆಟಗಾರ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ 105 ಸಿಡಿಸಿದ್ದ ಶ್ರೇಯಸ್, ಎರಡನೇ ಇನ್ನಿಂಗ್ಸ್ನಲ್ಲಿ 65 ರನ್ ಸಿಡಿಸಿ ತಂಡಕ್ಕೆ ಆಸರೆಯಾದರು. ಮೊದಲ ಇನ್ನಿಂಗ್ಸ್ನಲ್ಲಿ ಭಾರತ 345 ರನ್ ಗಳಿಸಿದ್ದರೆ, ನ್ಯೂಜಿಲೆಂಡ್ 296 ರನ್ಗಳಿಸಿ ಆಲೌಟ ಆಗಿತ್ತು. 49 ರನ್ಗಳ ಅಲ್ಪ ಮುನ್ನಡೆ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 4ನೇ ದಿನವಾದ ಇಂದು ಟೀ ಬ್ರೇಕ್ ವೇಳೆಗೆ 221 ರನ್ ಪೇರಿಸಿ, 270 ರನ್ ಮುನ್ನಡೆ ಸಾಧಿಸಿದೆ. ಸದ್ಯ ವದ್ಧಿಮಾನ್ ಸಹಾ 52 ರನ್ ಹಾಗೂ ಅಕ್ಷರ್ ಪಟೇಲ್ 24 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.
(ಇದನ್ನೂ ಓದಿ: ನ್ಯೂಜಿಲ್ಯಾಂಡ್ ವಿರುದ್ಧ ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಅಯ್ಯರ್.. ಪದಾರ್ಪಣೆ ಪಂದ್ಯದಲ್ಲೇ ಶ್ರೇಯಸ್ಗೆ ಶ್ರೇಯಸ್ಸು)