ಮುಂಬೈ: ಐಪಿಎಲ್ 12ನೇ ಆವೃತ್ತಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಆರ್ಸಿಬಿ, ಕನ್ನಡಿಗರೇ ಆಧಾರವಾಗಿರುವ ಪಂಜಾಬ್ ತಂಡವನ್ನು ಎದುರಿಸಲಿದೆ. ಮತ್ತೊಂದು ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮುಂಬೈ ತಂಡವನ್ನು ಎದುರಿಸಲಿದೆ.
ಸಂಜೆ 4 ಗಂಟೆಗೆ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಆಡಿರುವ 6 ಪಂದ್ಯಗಳಲ್ಲಿ 5 ರಲ್ಲಿ ಸೋಲನುಭವಿಸಿ ಕೇವಲ ಒಂದು ಪಂದ್ಯದಲ್ಲಿ ಗೆದ್ದಿರುವ ರಾಯಲ್ಸ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ವಾಂಖೆಡೆಯಲ್ಲಿ ಮುಖಾಮುಖಿಯಾಗುತ್ತಿವೆ.
ಕಳೆದ ಪಂದ್ಯದಲ್ಲಿ ಗಾಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ತಂಡಕ್ಕೆ ವಾಪಾಸ್ ಸೇರಿಕೊಳ್ಳಲಿದ್ದಾರೆ.
ಮುಖಾಮುಖಿ:ಎರಡು ತಂಡಗಳು ಐಪಿಎಲ್ನಲ್ಲಿ 21 ಬಾರಿ ಮುಖಾಮುಖಿಯಾಗಿದ್ದು 11 ರಲ್ಲಿ ಮುಂಬೈ ಜಯಿಸಿದ್ದರೆ, 9ರಲ್ಲಿ ರಾಜಸ್ಥಾನ ಗೆದ್ದಿದೆ. ವಾಂಖೆಡೆಯಲ್ಲಿ 6 ಬಾರಿ ಮುಖಾಮುಖಿಯಾಗಿದ್ದು ಮುಂಬೈ 4,ಆರ್ಆರ್ 2 ರಲ್ಲಿ ಜಯಸಾಧಿಸಿದೆ.