ಶಾರ್ಜಾ: ಭಾನುವಾರ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಐಪಿಎಲ್ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿವೆ. ಆರಂಭಿಕ ಆಟಗಾರರಾದ ಮಯಾಂಕ್ ಅಗರ್ವಾಲ್ ಮತ್ತು ಕೆ.ಎಲ್.ರಾಹುಲ್ ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಆರಂಭವನ್ನು ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 183 ರನ್ಗಳ ಜೊತೆಯಾಟವಾಡಿದ್ದು, ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಅತಿ ಹೆಚ್ಚು ರನ್ಗಳ ಜೊತೆಯಾಟವಾಗಿದೆ.
183 ರನ್ ಗಳಿಸಿದ ಈ ಜೋಡಿ ಐಪಿಎಲ್ ಇತಿಹಾಸದಲ್ಲಿ ಮೊದಲ ವಿಕೆಟ್‌ಗೆ ಎರಡನೇ ಗರಿಷ್ಠ ರನ್ ಜೊತೆಯಾಟ ನಡೆಸಿತು. ಇಂಡಿಯನ್ ಪ್ರೀಮಿಯರ್ ಲೀಗ್ನ ಕಳೆದ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 185 ರನ್ ಗಳಿಸಿದ್ದ ಸನ್ ರೈಸರ್ಸ್ ಹೈದರಾಬಾದ್‌ನ ಜಾನಿ ಬೈರ್ ಸ್ಟೋವ್ ಮತ್ತು ಡೇವಿಡ್ ವಾರ್ನರ್ ಗರಿಷ್ಠ ರನ್ ಜೊತೆಯಾಟದ ದಾಖಲೆ ಹೊಂದಿದ್ದಾರೆ.